ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಮತಗಟ್ಟೆ ಸಮೀಕ್ಷೆ ಸುಳ್ಳಾಗಲಿವೆ: ಶಾಸಕ ತುಕಾರಾಂ

Published 3 ಜೂನ್ 2024, 16:13 IST
Last Updated 3 ಜೂನ್ 2024, 16:13 IST
ಅಕ್ಷರ ಗಾತ್ರ

ಸಂಡೂರು: 'ಲೋಕಸಭೆ ಚುನಾವಣೆ ಸಮೀಕ್ಷೆಗಳನ್ನು ಮನೆಯಲ್ಲಿಯೇ ಕುಳಿತು ತಯಾರಿಸಿದ್ದಾರೆ.‌ ಅದನ್ನು ಮಾಧ್ಯಮಗಳಲ್ಲಿ ಬಿತ್ತರ ಮಾಡಿಸಿದ್ದಾರೆ’ ಎಂದು ಬಳ್ಳಾರಿ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಇ.ತುಕರಾಂ ಆರೋಪಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಸೋಮವಾರ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆ ಪತ್ನಿ ಮತ್ತು ಪುತ್ರನೊಂದಿಗೆ ಮತ ಚಲಾಯಿಸಿ ಬಳಿಕ ಮಾತನಾಡಿದ ಅವರು, ‘ಈ ಬಾರಿಯ ಸಮೀಕ್ಷೆಗಳ: ಇಂಡಿಯಾ ಕೂಟ ಬಹುಮತ ಪಡೆಯಲಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಗೆಲುವು ಖಚಿತ’ ಎಂದು ಭರವಸೆ ವ್ಯಕ್ತಪಡಿಸಿದರು.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮ ಹಗರಣ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಡಗಳು ಕೇಳಿ ಬಂದಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ತನಿಖೆಗಾಗಿ ಎಸ್.ಐ.ಟಿ ನೇಮಕವಾಗಿದೆ. ವರದಿ ಬಂದ ನಂತರ ಮುಖ್ಯಮಂತ್ರಿ,ಉಪಮುಖ್ಯಮಂತ್ರಿ ಹಾಗೂ ಪಕ್ಷದ ಹೈಕಮಾಂಡ್ ಈ ಬಗ್ಗೆ ತೀರ್ಮಾನಿಸಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT