ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೂವಿನಹಡಗಲಿ: ರೈತರ ಸಾಲ ಮನ್ನಾಕ್ಕೆ ಆಗ್ರಹ

Published 25 ನವೆಂಬರ್ 2023, 16:25 IST
Last Updated 25 ನವೆಂಬರ್ 2023, 16:25 IST
ಅಕ್ಷರ ಗಾತ್ರ

ಹೂವಿನಹಡಗಲಿ: ‘ಮುಂಗಾರು ವೈಫಲ್ಯದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬಿತ್ತನೆಗೆ ಸಾಲ ಮಾಡಿದ್ದ ರೈತರು ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ. ಸರ್ಕಾರ ಕೂಡಲೇ ಕೃಷಿ ಸಾಲಮನ್ನಾ ಮಾಡಬೇಕು’ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಮಹೇಶ್ವರ ಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ವಿ.ಬಿ.ಕೊಟ್ರೇಶ ಆಗ್ರಹಿಸಿದರು.

‘ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹಾಗೂ ತಾಲ್ಲೂಕಿನ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ. 29ರಂದು ಪಟ್ಟಣದಲ್ಲಿ ಭಾರತೀಯ ಕಿಸಾನ್ ಸಂಘ ಪ್ರತಿಭಟನೆ ಹಮ್ಮಿಕೊಂಡಿದೆ. ಸಂಘದ ಉತ್ತರ ಪ್ರಾಂತ್ಯದ ಅಧ್ಯಕ್ಷ ವಿವೇಕ ಮೋರೆ, ಪುಟ್ಟಸ್ವಾಮಿ, ಗಂಗಾಧರ ಪಾಲ್ಗೊಳ್ಳಲಿದ್ದಾರೆ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬೆಳೆವಿಮೆ ಕಂತು ಪಾವತಿಸಿದ ಎಲ್ಲ ರೈತರಿಗೂ ವಿಮೆ ಪರಿಹಾರ ನೀಡಬೇಕು ಎಂದರು.

ಲಕ್ಷ್ಮಣ, ವಿಜಯಕುಮಾರ್, ಹೊಳೆಯಾಚೆ ಕೊಟ್ರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT