ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೂಡ್ಲಿಗಿ | ಗೊಬ್ಬರ ಅಧಿಕ ಬೆಲೆಗೆ ಮಾರಾಟ: ತಡೆಗೆ ಒತ್ತಾಯ

Published 27 ಮೇ 2024, 15:11 IST
Last Updated 27 ಮೇ 2024, 15:11 IST
ಅಕ್ಷರ ಗಾತ್ರ

ಕೂಡ್ಲಿಗಿ: ತಾಲ್ಲೂಕಿನಲ್ಲಿ ಖಾಸಗಿ ಅಂಗಡಿಗಳಲ್ಲಿ ಬಿತ್ತನೆ ಬೀಜ, ಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವುದನ್ನು ತಡೆಯಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಾಷಾ ಸಾಬ್ ಮಾತನಾಡಿ, ‘ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಬಿತ್ತನೆ ಮಾಡಲು ಮುಂದಾಗಿದ್ದಾರೆ. ಆದರೆ ತಾಲ್ಲೂಕಿನಲ್ಲಿ ಕೆಲ ಖಾಸಗಿ ಅಂಗಡಿಗಳಲ್ಲಿ ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಬೀಜ, ಗೊಬ್ಬರ ಮಾರಾಟ ಮಾಡುತ್ತಿದ್ದಾರೆ. ಅಂಗಡಿ ಮಾಲೀಕರನ್ನು ಕರೆಸಿ ಯಾವುದೇ ಕಾರಣಕ್ಕೂ ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚಿನೆ ಬೆಲೆಗೆ ಮಾರಾಟ ಮಾಡದಂತೆ ಹೇಳಬೇಕು. ಒಂದು ವೇಳೆ ಇದನ್ನು ಮೀರಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿರುವುದು ಕಂಡು ಬಂದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ಉಪ ತಹಶೀಲ್ದಾರ್ ಚಂದ್ರಶೇಖರ್ ಮನವಿ ಪತ್ರ ಸ್ವೀಕರಿಸಿದರು. ಕೃಷಿಕ ಸಮಾಜದ ತಾಲ್ಲೂಕು ಅಧ್ಯಕ್ಷ ನಂದಿ ಜಯಣ್ಣ, ತಾಲ್ಲೂಕು ಸಂಚಾಲಕ ಎಂ. ಪರುಶುರಾಮ, ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷರಾದ ಕೈವಲ್ಯಾಪುರದ ಆರ್. ಮಂಜುನಾಥ, ಬಡೇಲಡಕು ಗ್ರಾಮದ ಜೆ. ನಾಗರಾಜ, ಬಿಬಿ ತಾಂಡಾದ ಉಪಾಧ್ಯಕ್ಷ ಶೇಖರ್ ನಾಯ್ಕ್, ಪಿ. ಬಾಷಾ ಸಾಬ್, ಚಾಂದ್ ಬಾಷಾ, ಖಾಸೀಂ ಸಾಬ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT