ಕುರುಗೋಡು: ಇಲ್ಲಿನ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಆಡಳಿತ, ಪುರಸಭೆ, ಸಮುದಾಯ ಆರೋಗ್ಯ ಕೇಂದ್ರ, ಪೊಲೀಸ್ ಇಲಾಖೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ ಆಯೋಜಿಸಿದ್ದ ಆರೋಗ್ಯ ತಪಾಸಣೆ ಉಚಿತ ಶಿಬಿರದಲ್ಲಿ 350ಕ್ಕೂ ಅಧಿಕ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಬೆಂಗಳೂರು ಕಾವೇರಿ ಆಸ್ಪತ್ರೆಯ ಹೃದಯರೋಗ ತಜ್ಞ ಸುರೇಂದ್ರ, ಎಲುಬು, ಕೀಲು ತಜ್ಞ ವೈದ್ಯ ಜಗದೀಶ್, ಡಾ. ಪ್ರತಾಪ್ ಮತ್ತು ಡಾ. ಸೈಯದ್ ಮುಕ್ತಿ ಶಿಬಿರದಲ್ಲಿ ಹೃದಯ ರೋಗ ಮತ್ತು ಮಂಡಿಚಿಪ್ಪು ಸಮಸ್ಯೆ ತಪಾಸಣೆ ಮಾಡಿದರು.

25 ಜನರ ಮಂಡಿಚಿಪ್ಪು ಬದಲಾವಣೆ ಮತ್ತು 10 ಜನರಿಗೆ ಹೃದರ ಶಸ್ತ್ರಚಿಕಿತ್ಸೆಗೆ ಗುರುತಿಸಲಾಯಿತು.

ಶಿಬಿರ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ನರಸಪ್ಪ, ಆಧುನಿಕ ಜೀವನ ಶೈಲಿಯ ಪರಿಣಾಮ ನಮಗರಿವಿಲ್ಲದೆ ಮನುಷ್ಯರ ದೇಹದಲ್ಲಿ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದು ಸಲಹೆ ನೀಡಿದರು.

ಸಾಮಾಜಿಕ ಕಳಕಳಿಯ ಸಂಘಟನೆಗಳು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಆರೋಗ್ಯ ತಪಾಸಣೆಗೆ ಉಚಿತ ಶಿಬಿರ ಆಯೋಜಿಸಿದ್ದಾರೆ. ಜನರು ಶಿಬಿರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧ ಯೋಜನೆ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ಕಾರ್ಯಕ್ರ ಕುರಿತು ಪ್ರಸ್ತಾವಿಕ ಮಾತನಾಡಿದರು.

ಪುರಸಭೆ ಅಧ್ಯಕ್ಷ ಟಿ.ಶೇಖಣ್ಣ ಅಧ್ಯಕ್ಷತೆ ವಹಿಸಿದ್ದರು.

ಪುರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ, ಸಂಸ್ಥೆಯ ತಾಲ್ಲೂಕು ಯೋಜನಾಧಿಕಾರಿ ರಾಘವೇಂದ್ರ, ಮೇಲ್ವಿಚಾರಕರಾದ, ರೇಖಾ, ಪ್ರಭು ಮತ್ತು ಮಹಾಂತೇಶ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ವಾಗೀಶ್ ಆಶಾಪುರ ಮತ್ತು ಚೇಗೂರು ಷಣ್ಮುಖ, ಕಾವೇರಿ ಆಸ್ಪತ್ರೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಮತ್ತು ಪುರಸಭೆ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.