ಗುರುವಾರ , ಡಿಸೆಂಬರ್ 1, 2022
21 °C
ಪ್ರತಿ ಪಂಚಾಯಿತಿಗೆ ತಲಾ ₹5 ಲಕ್ಷ, ಪ್ರಶಸ್ತಿ ಪತ್ರ

ವಿಜಯನಗರದ ಐದು, ಬಳ್ಳಾರಿಯ ಮೂರು ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಅವಳಿ ಜಿಲ್ಲೆಗಳಾದ ವಿಜಯನಗರ–ಬಳ್ಳಾರಿಯ ಎಂಟು ಗ್ರಾಮ ಪಂಚಾಯಿತಿಗಳು 2020–21ನೇ ಸಾಲಿನ ‘ಗಾಂಧಿ ಗ್ರಾಮ’ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

ವಿಜಯನಗರ ಜಿಲ್ಲೆಯ ಐದು ಗ್ರಾಮ ಪಂಚಾಯಿತಿಗಳು, ಬಳ್ಳಾರಿಯ ಮೂರು ಪಂಚಾಯಿತಿಗಳು ಪ್ರಶಸ್ತಿಗೆ ಆಯ್ಕೆಯಾಗಿವೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಸುಗ್ಗೇನಹಳ್ಳಿ ಗ್ರಾಮ ಪಂಚಾಯಿತಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮೋರಗೇರೆ, ಕೂಡ್ಲಿಗಿ ತಾಲ್ಲೂಕಿನ ಹೊಸಹಳ್ಳಿ, ಹೂವಿನಹಡಗಲಿ ತಾಲ್ಲೂಕಿನ ಹೊಳಗುಂದಿ ಹಾಗೂ ಹರಪನಹಳ್ಳಿ ತಾಲ್ಲೂಕಿನ ಹಲುವಾಗಲು ಗ್ರಾಮ ಪಂಚಾಯಿತಿಗಳು ಸೇರಿವೆ.

ಬಳ್ಳಾರಿ ಜಿಲ್ಲೆ ಬಳ್ಳಾರಿ ತಾಲ್ಲೂಕಿನ ಶಿಡಗಿನಮೊಳ, ಸಿರುಗುಪ್ಪ ತಾಲ್ಲೂಕಿನ ಕುಡದರಹಾಳ್‌, ಸಂಡೂರು ತಾಲ್ಲೂಕಿನ ತೋರಣಗಲ್‌ ಗ್ರಾಮ ಪಂಚಾಯಿತಿಗಳು ಪ್ರಶಸ್ತಿಗೆ ಆಯ್ಕೆಯಾಗಿವೆ. ‘ಉತ್ತಮವಾಗಿ ಕೆಲಸ ನಿರ್ವಹಿಸಿದ ಪಂಚಾಯಿತಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಪ್ರತಿ ಪಂಚಾಯಿತಿಗೆ ತಲಾ ₹5 ಲಕ್ಷ ನಗದು ಹಣ, ಪ್ರಶಸ್ತಿ ಪತ್ರ ಕೊಟ್ಟು ಪ್ರೋತ್ಸಾಹಿಸಲಾಗುತ್ತದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ನಿರ್ದೇಶಕ ಕೆ.ಬಿ. ಆಂಜನಪ್ಪ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು