ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವೀಪ್‌ ಸಮಿತಿಯಿಂದ ಬಾಲಕಿಯರ ಕ್ರಿಕೆಟ್‌ ಪಂದ್ಯಾವಳಿ

Last Updated 20 ಮಾರ್ಚ್ 2023, 15:43 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಜಿಲ್ಲಾ ಸ್ವೀಪ್‌ ಕಾರ್ಯಕ್ರಮದ ಅಂಗವಾಗಿ ನಗರದ ಡಾ. ಪುನೀತ್‌ ರಾಜಕುಮಾರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ 19 ವರ್ಷದೊಳಗಿನವರ ಬಾಲಕಿಯರ ಕ್ರಿಕೆಟ್‌ ಪಂದ್ಯಾವಳಿ ಆಯೋಜಿಸಲಾಗಿತ್ತು.

ಪಂದ್ಯಾವಳಿಯಲ್ಲಿ ಹೊಸಪೇಟೆ ಸೇರಿದಂತೆ ಜಿಲ್ಲೆಯ ವಿವಿಧ ಭಾಗದ ಆರು ತಂಡಗಳು ಪಾಲ್ಗೊಂಡಿದ್ದವು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಬಿ. ಸದಾಶಿವಪ್ರಭು ಅವರು ಪಂದ್ಯಾವಳಿಗೆ ಚಾಲನೆ ನೀಡಿ, ಭವ್ಯ ಭಾರತದ ಮುಂದಿನ ಪ್ರಜೆಗಳಾಗುವ ನೀವು ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಂಡು ಕ್ರೀಡೆಗಳಲ್ಲಿ ಹೆಚ್ಚಾಗಿ ಭಾಗವಹಿಸಬೇಕೆಂದು ತಿಳಿಸಿದರು.

ಯುವತಿಯರು ಕ್ರೀಡೆಗಳ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಪಂದ್ಯಗಳಲ್ಲಿ ಆಟಗಾರ್ತಿಯರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅವರನ್ನು ಸ್ಫೂರ್ತಿಯಾಗಿ ಪಡೆದು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಂಜುನಾಥ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಕೆ.ವಿ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಹರಿಸಿಂಗ್ ರಾಥೋಡ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT