ಹಗರಿಬೊಮ್ಮನಹಳ್ಳಿ: ಸರ್ಕಾರಿ ನೌಕರರು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಶನಿವಾರ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದಿಂದ ಅಧಿಕಾರಿಗಳು, ನಿವೃತ್ತ ಸರ್ಕಾರಿ ನೌಕರರು, ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನೌಕರರು, ವೃಂದ ಸಂಘಗಳ ಅಧ್ಯಕ್ಷರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಘ ಸ್ಥಾಪನೆಗೊಂಡು 100 ವರ್ಷ ತುಂಬಿವೆ. ಸಂಘಟನೆಗೆ ಹಿಂದೆ ಇದ್ದಷ್ಟು ಸಮಸ್ಯೆಗಳಿಲ್ಲ. ಹಲವಾರು ಭಾಗ್ಯಗಳು ಜಾರಿಯಾಗಿರುವ ಸಂದರ್ಭದಲ್ಲಿ 7ನೇ ವೇತನ ಆಯೋಗ ಜಾರಿಗೆ ಬರುವುದಕ್ಕೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಕಾರಣ ಎಂದರು.

ಮುಂದಿನ ನೌಕರರ ಸಂಘದ ಚುನಾವಣೆಯಲ್ಲಿ ಉತ್ತಮವಾದ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು, ನೌಕರರ ಮಧ್ಯೆ ವೈಮನಸ್ಸು ಬೇಡ ಎಂದು ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪರಮೇಶ್ವರ ಮಾತನಾಡಿ, ಸಂಘದ ಹೋರಾಟದಿಂದ ರಾಜ್ಯದ ಎಲ್ಲ ನೌಕರರಿಗೆ ಹಲವಾರು ಸೌಲಭ್ಯಗಳು ದೊರೆತಿವೆ ಎಂದರು.

ಸಂಘ ತಾಲ್ಲೂಕಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್, ತಾಲ್ಲೂಕು ವೈದ್ಯಾಧಿಕಾರಿ ಪ್ರವೀಣ್‍ಕುಮಾರ್, ಡಾ.ಅಚ್ಯುತರಾಯ, ಡಾ.ತಿಪ್ಪೇಸ್ವಾಮಿ, ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸೂರಪ್ಪ ಮಾತನಾಡಿದರು.

ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಡ್ಲಿ ವೀರಭದ್ರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಲೋಕಪ್ಪ, ಗೂಳಪ್ಪ, ಮಂಜುನಾಥ, ಯಂಕಾರೆಡ್ಡಿ ಇದ್ದರು. ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಪಿ.ಎಂ.ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಕೊಟ್ರೇಶ್, ಯು.ಗೋಣಿಪ್ಪ, ಎ.ನಾಗರಾಜ, ಎನ್.ಗುರುಬಸವರಾಜ, ಬಿ.ಕೊಟ್ರಪ್ಪ, ಟಿ.ಸೋಮಶೇಖರ್, ದಾದೀಬಿ ರೆಹಮಾನ್, ದೀಪಿಕಾ, ಕೆ.ಶಾರದಾ ಮಂಜುನಾಥ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.