ಬಳ್ಳಾರಿ: ‘ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳ ಪರವಾಗಿದೆ’ ಎಂದು ಡಾ. ಬಾಬು ಜಗಜೀವನ್ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ (ಲಿಡ್ಕರ್) ಅಧ್ಯಕ್ಷ ಮುಂಡರಗಿ ನಾಗರಾಜ್ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬುಧವಾರ ಸರ್ಕಾರದ ವತಿಯಿಂದ ಆಯೋಜಿಸಿದ್ದ ಬಳ್ಳಾರಿ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಒಳಮೀಸಲಾತಿ ಜಾರಿ ಅನುಷ್ಠಾನದಿಂದ ಹುದ್ದೆ ಭರ್ತಿ ಪ್ರಕ್ರಿಯೆ ತಡೆಹಿಡಿಯಲಾಗಿತ್ತು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸಚಿವ ಸಂಪುಟದ ನಿರ್ಧಾರದಂತೆ ಸದ್ಯದಲ್ಲೇ 52,000ಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ’ ಎಂದರು.

‘ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಆಯೋಜಿಸಿರುವ ಈ ಉದ್ಯೋಗದಲ್ಲಿ 60ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ಸುಮಾರು 6,000ಕ್ಕೂ ಅಧಿಕ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ’ ಎಂದು ನಾಗರಾಜ ತಿಳಿಸಿದರು.

‘ಬಳ್ಳಾರಿ ಜಿಲ್ಲೆಯು ಕೈಗಾರಿಕಾ ಹಬ್ ಆಗಿರುವುದರಿಂದ, ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ, ವಿವಿಧ ದೊಡ್ಡ ಕೈಗಾರಿಕೆಗಳ ಸಹಯೋಗದೊಂದಿಗೆ ಇನ್ನೂ ದೊಡ್ಡ ಮಟ್ಟದ ಮೇಳವನ್ನು ಆಯೋಜಿಸುವ ಕುರಿತು ಚರ್ಚಿಸಲಾಗುವುದು’ ಎಂದು ಅವರು ತಿಳಿಸಿದರು.

ಮಹಾನಗರ ಪಾಲಿಕೆ ಮಹಾಪೌರ ಪಿ.ಗಾದೆಪ್ಪ ಮಾತನಾಡಿ, ‘ಬಳ್ಳಾರಿ ಜಿಲ್ಲೆಯು ಕಲ್ಯಾಣ ಕರ್ನಾಟಕ ಭಾಗದಲ್ಲೇ ಅತಿ ಹೆಚ್ಚು ಕೈಗಾರಿಕೆಗಳನ್ನು ಹೊಂದಿರುವ ಜಿಲ್ಲೆ. ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಈ ಮಹತ್ವದ ಕಾರ್ಯ ಶ್ಲಾಘನೀಯ’ ಎಂದರು.

ಬಳ್ಳಾರಿ ವಲಯ ಪೊಲೀಸ್ ಉಪಮಹಾನಿರೀಕ್ಷಕ ಡಾ.ಪಿ.ಎಸ್. ಹರ್ಷ ಮಾತನಾಡಿ, ‘ಯುವಪೀಳಿಗೆಗೆ ಅಗತ್ಯವಾದುದು ಉದ್ಯೋಗಾವಕಾಶ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉದ್ಯೋಗ ಮೇಳಗಳು ಅತಿ ಅವಶ್ಯಕ. ಈ ಭಾಗದ ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಇಂದಿನ ತುರ್ತು’ ಎಂದು ಹೇಳಿದರು.

ಇದೇ ವೇಳೆ ವಿಟಿಎಸ್ ಎಚ್ಆರ್ ಸರ್ವೀಸಸ್ ನಲ್ಲಿ ಉದ್ಯೋಗ ಪಡೆದ ಬಳ್ಳಾರಿಯ ಜಿ.ಎಸ್. ಹರ್ಷ ಅವರಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶ ಪತ್ರ ನೀಡಲಾಯಿತು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್ ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ ಇದ್ದರು.

‘ಹೆಚ್ಚಿನ ಕೌಶಲ ಇದ್ದರೆ ಒಳಿತು’

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ ‘ಬಳ್ಳಾರಿ ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತ ಅಭ್ಯರ್ಥಿಗಳಿದ್ದಾರೆ. ಆದರೆ ಕಂಪನಿಗಳು ಮತ್ತು ಅಭ್ಯರ್ಥಿಗಳ ನಡುವೆ ನೇರ ಸಂಪರ್ಕದ ಕೊರತೆಯಿದೆ. ಇದನ್ನು ಹೋಗಲಾಡಿಸಲು ಉದ್ಯೋಗ ಮೇಳ ವೇದಿಕೆ ಸಿದ್ಧಪಡಿಸಲಾಗಿದೆ’ ಎಂದರು. ‘ಕೇವಲ ಪುಸ್ತಕದ ಜ್ಞಾನವಿದ್ದರೆ ಸಾಲದು. ಕಂಪ್ಯೂಟರ್ ಲ್ಯಾಂಗ್ವೇಜ್ಗಳಾದ ಪೈಥಾನ್ ಜಾವಾ ಡೇಟಾ ಸೈನ್ಸ್ ಹಾಗೂ ಎಐ-ಎಂಎಲ್ ನಂತಹ ವಿಶೇಷ ಕೌಶಲ್ಯಗಳನ್ನು ಪಡೆಯುವುದು ಅತ್ಯಗತ್ಯ. ಮುಖ್ಯವಾಗಿ ಅಭ್ಯರ್ಥಿಗಳಲ್ಲಿ ಕೌಶಲ್ಯದ ಜೊತೆಗೆ ಆತ್ಮವಿಶ್ವಾಸ ಇರುವುದು ಅತಿ ಮುಖ್ಯ. ಆಗ ಮಾತ್ರ ಸಂದರ್ಶನಗಳಲ್ಲಿ ಯಶಸ್ವಿಯಾಗಲು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.