ಬಳ್ಳಾರಿ: ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲ ತಿಂಗಳ ಹಿಂದೆ ನಡೆದಿದ್ದ ಎರಡು ಮನೆಗಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಿರುವ ಪೊಲೀಸರು 74 ಗ್ರಾಂ ಬಂಗಾರದ ಆಭರಣಗಳು ಮತ್ತು ನಗದು ಸೇರಿ ಒಟ್ಟು ₹7,00,000 ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಳ್ಳಾರಿ ರೈಲ್ವೇ ನಿಲ್ದಾಣದ ಬಳಿ ಇರುವ ಎರಡು ಮನೆಗಳಲ್ಲಿ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಕಳ್ಳತನ ನಡೆದಿತ್ತು. ಈ ಬಗ್ಗೆ ಎಫ್ಐಆರ್ ದಾಖಲಾಗಿತ್ತು.

‘ವಿಚಾರಣೆ ಕೈಗೆತ್ತಿಕೊಂಡಿದ್ದ ಗಾಂಧಿನಗರ ಠಾಣೆ ಪೊಲೀಸರು ಸೆ. 21ರಂದು ಆರೋಪಿ, ದೇವದುರ್ಗ ತಾಲೂಕಿನ ನಾಗರಾಜ (39) ಎಂಬಾತನನ್ನು ಬಂಧಿಸಿದ್ದರು. ಈತನನ್ನು ವಿಚಾರಣೆ ನಡೆಸಿದಾಗ ಎರಡೂ ಮನೆಗಳಲ್ಲಿಯೂ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.

‘ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಲಾಗಿದೆ.

ತನಿಖಾ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗೆ ಎಸ್ಪಿ ಬಹುಮಾನ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.