ಹಗರಿಬೊಮ್ಮನಹಳ್ಳಿ: ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು (ಎಸ್ಐಆರ್) ವಿರೋಧಿಸಿ ಪಟ್ಟಣದಲ್ಲಿ ಜೂನ್ 17ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಜೆ.ಎಂ.ವೀರಸಂಗಯ್ಯ ಹೇಳಿದರು.

ಪಟ್ಟಣದ ಕೃಷಿಕ ಭವನದಲ್ಲಿ ಬುಧವಾರ ಜಾತ್ಯತೀತ ಪಕ್ಷಗಳ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಎಸ್ಐಆರ್ ಮೂಲಕ ಸಾಮಾನ್ಯ ಮತದಾರರ ಹಕ್ಕುಗಳನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಬಡವರು, ಕಾರ್ಮಿಕರು, ಗ್ರಾಮೀಣ ಪ್ರದೇಶದ ಜನರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಜನರ ಮತದಾನದ ಹಕ್ಕುಗಳನ್ನು ದುರ್ಬಲಗೊಳಿಸುವ ಸಂಚು ನಡೆಯುತ್ತಿದೆ. ಸರ್ಕಾರ ಹಾಗೂ ಚುನಾವಣಾ ಆಯೋಗ ಪಾರದರ್ಶಕ ಮತ್ತು ಸಂವಿಧಾನಬದ್ಧ ವಿಧಾನಗಳನ್ನು ಅನುಸರಿಸಬೇಕು’ ಎಂದರು.

ಜನವಿರೋಧಿ ಎಸ್ಐಆರ್ ವಿರುದ್ಧ ಸರ್ಕಾರವು ದಿಟ್ಟ ನಿಲುವು ತಾಳಬೇಕು ಎಂಬ ಬೇಡಿಕೆ ಸೇರಿ ವಿವಿಧ ಹಕ್ಕೊತ್ತಾಯಗಳಿಗೆ ಒತ್ತಾಯಿಸಿದ ಅವರು ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಸುಮಾರು 5 ಸಾವಿರ ಜನರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೋಟೇಶ್ ಅಕ್ಕಿ, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಎಚ್.ದೊಡ್ಡಬಸಪ್ಪ, ಕೃಷಿಕ ಸಮಾಜದ ಅಧ್ಯಕ್ಷ ಕೆ.ಪಿ.ದೇವರಾಜ್, ಇರ್ಫಾನ್, ಬ್ರೆಡ್ ನಜೀರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-25-1414088279

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.