ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ನಕರಾಳ ತಾಂಡಾದ ಮಹಿಳೆಯೊಬ್ಬರು ಶನಿವಾರ ಮೃತಪಟ್ಟಿದ್ದು, ಡೆಂಗಿ ಶಂಕೆ ವ್ಯಕ್ತವಾಗಿದೆ.

ಎಲ್. ಲಾವಣ್ಯ(29) ಮೃತರು. ಜ್ವರದಿಂದ ಬಳಲುತ್ತಿದ್ದ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಧಾರವಾಡದ ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಖಾಸಗಿ ಆಸ್ಪತ್ರೆಯ ವೈದ್ಯ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾಗಿ ಮೃತಳ ಪತಿ ಎಲ್. ಚಂದ್ರನಾಯ್ಕ ತಾಲ್ಲೂಕು ವೈದ್ಯಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

‘ಮಹಿಳೆಗೆ ಅತಿಯಾದ ಜ್ವರ ಇದ್ದಿದ್ದರಿಂದ ಡೆಂಗಿ ಸಂಶಯ ವ್ಯಕ್ತವಾಗಿದೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ಪ್ರವೀಣ್‍ಕುಮಾರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.