ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಗರಿಬೊಮ್ಮನಹಳ್ಳಿ | 'ಮಹಿಳೆ ಆತ್ಮಹತ್ಯೆ; ಕ್ರಮಕ್ಕೆ ಆಗ್ರಹ'

Published 6 ಏಪ್ರಿಲ್ 2024, 16:03 IST
Last Updated 6 ಏಪ್ರಿಲ್ 2024, 16:03 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ: ‘ತಾಲ್ಲೂಕಿನ ಮೋರಿಗೇರಿಯಲ್ಲಿ ಮೈಲಮ್ಮ ಸಾವಿಗೆ ಕಾರಣರಾದ ಗ್ರಾಮ ಪಂಚಾಯ್ತಿ ಅಧ್ಯಕ್ಷ, ಪಿಡಿಒ ಸೇರಿದಂತೆ ಎಲ್ಲ ಸಿಬ್ಬಂದಿಯನ್ನು ಬಂಧಿಸಬೇಕು’ ಎಂದು ದಲಿತ ಸೇನೆಯ ಮುಖಂಡರು ಒತ್ತಾಯಿಸಿದರು.

ಗ್ರಾಮದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಚಂದ್ರಶೇಖರ್ ಶಂಬಣ್ಣ ಗಾಳಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಸೇನೆಯ ಮುಖಂಡ ದುರುಗೇಶ್ ಮಾತನಾಡಿ, ‘ರೈತ ಮಹಿಳೆ ದಿದ್ಗಿ ಮೈಲಮ್ಮ, 30 ವರ್ಷಗಳಿಂದ ಅದೇ ಜಾಗದಲ್ಲಿ ಕೃಷಿ ಮಾಡುತ್ತಿದ್ದರು. ಸಾಗುವಳಿ ಪಟ್ಟಾ ನೀಡುವಂತೆ ಸರ್ಕಾರಕ್ಕೆ ಅರ್ಜಿಯನ್ನೂ ಸಲ್ಲಿಸಿದ್ದರು. ಆದರೂ ಏಕಾಏಕಿಯಾಗಿ ಜಮೀನಿನಲ್ಲಿ ನರೇಗಾ ಕಾಮಗಾರಿ ನಡೆಸಲು ಮುಂದಾಗಿದ್ದರಿಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ತಿಳಿಸಿದರು.

‘ಮೃತ ಮಹಿಳೆಯ ಪುತ್ರನಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಅವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಹಾಗೂ ಐದು ಎಕರೆ ಕೃಷಿ ಜಮೀನು ನೀಡಬೇಕು’ ಎಂದು ಆಗ್ರಹಿಸಿದರು.

ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್‌ ಭರವಸೆ ನೀಡಿದ ಬಳಿಕ ಮಹಿಳೆಯ ಅಂತ್ಯಸಂಸ್ಕಾರ ನಡೆಸಲಾಯಿತು.

ಸೇನೆಯ ಸಂಡೂರು ಘಟಕದ ಅಧ್ಯಕ್ಷ ರಾಜೇಶ್ ಹೆಗಡೆ, ಆನೇಕಲ್ ಕೋಟೆಪ್ಪ, ಮೇಗೇರಿ ಮೈಲಪ್ಪ ಇದ್ದರು.

ಮುಂಜಾಗ್ರತಾ ಕ್ರಮವಾಗಿ ಡಿವೈಎಸ್‍ಪಿ ವೆಂಕಟಪ್ಪ ನಾಯಕ, ಎಸ್‌ಐಗಳಾದ ವಿಕಾಸ್ ಲಮಾಣಿ, ಬಸವರಾಜ, ಪಿಎಸ್‍ಐ ನಾರಾಯಣ ಸೇರಿದಂತೆ 25ಕ್ಕೂ ಹೆಚ್ಚು ಪೊಲೀಸರು ಸ್ಥಳದಲ್ಲಿ  ಮೊಕ್ಕಾಂ ಹೂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT