ಬಳ್ಳಾರಿ: ರಾಜ್ಯ ವೈಜ್ಞಾನಿಕ ಸಂಶೋಧಾನಾ ಪರಿಷತ್ತಿನ ರಾಜ್ಯ ಮಟ್ಟದ 5ನೇ ‘ವೈಜ್ಞಾನಿಕ ಸಮ್ಮೇಳನ-2025’ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.28 ರಿಂದ 30ರ ವರೆಗೆ ನಡೆಯಲಿದೆ ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ನ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಚ್.ಎಂ.ಚನ್ನಬಸವಸ್ವಾಮಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ‘ರಾಜ್ಯ ಮಟ್ಟದ ಸಮ್ಮೇಳನಕ್ಕೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್, ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್, ಪವಾಡ ಭಂಜಕ ಸಂಸ್ಥಾಪಕ ಹುಲಿಕಾಲ್ ನಟರಾಜ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಸಾಧಕರಿಗೆ ವಿಶಿಷ್ಟ ಸೇವಾ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದರು.

ನಗರದ ಹೊಸಪೇಟೆ ಬೈಪಾಸ್ ರಸ್ತೆಯ ಬಳಿಯ ಜ್ಞಾನಾಮೃತ ಕಾಲೇಜಿನಲ್ಲಿ ಡಿ.11 ರಂದು ಮಧ್ಯಾಹ್ನ ೩.೩೦ಕ್ಕೆ ‘ಪವಾಡ ರಹಸ್ಯ ಬಯಲು ಕಾರ್ಯಕ್ರಮ’ ಹಮ್ಮಿಕೊಳ್ಳಲಾಗಿದೆ. ಪವಾಡ ಭಂಜಕ ಸಂಸ್ಥಾಪಕ ಹುಲಿಕಲ್ ನಟರಾಜ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜತೆಗೆ ಮಕ್ಕಳಿಂದಲೇ ತಯಾರಿಸಿದ ಉಪಕರಣಗಳೊಂದಿಗೆ ವಸ್ತು ಪ್ರದರ್ಶನ ನಡೆಯಲಿದೆ ಎಂದರು.

ತುಂಗಭದ್ರಾ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮ ಗೌಡ, ಜ್ಞಾನಮೃತ ಕಾಲೇಜಿನ ಪ್ರಾಂಶುಪಾಲ ಯಶವಂತ ಶೆಟ್ಟಿ, ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ನ ಪದಾಕಾರಿಗಳಾದ ಶಾನಾವಾಸಪುರ ರಾಜಶೇಖರ್ ಗೌಡ, ಎಚ್.ಸಿ.ನಾಗಭೂಷಣ್, ಅಭಿಷೇಕ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.