ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಮಾಧ್ಯಮ ಸಂಚಾಲಕನಿಂದ ಕಿರುಕುಳ ಆರೋಪ: ವೈದ್ಯೆ ದೂರು

Published 2 ಜೂನ್ 2024, 15:16 IST
Last Updated 2 ಜೂನ್ 2024, 15:16 IST
ಅಕ್ಷರ ಗಾತ್ರ

ಬಳ್ಳಾರಿ: ಬಿಜೆಪಿ ಬೆಂಗಳೂರು ಘಟಕದ ಸಾಮಾಜಿಕ ಮಾಧ್ಯಮ ಸಂಚಾಲಕ ವಿನೋದ್‌ ಕೃಷ್ಣಮೂರ್ತಿ(47) ಎಂಬಾತ ತನಗೆ ದೈಹಿಕ, ಮಾನಸಿಕ ಕಿರುಕುಳ ನೀಡಿ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಬಳ್ಳಾರಿ ನಗರದ ವೈದ್ಯೆಯೊಬ್ಬರು ಕೌಲ್‌ಬಜಾರ್‌ ಠಾಣೆಗೆ ಶನಿವಾರ ದೂರು ನೀಡಿದ್ದಾರೆ.  

ಈ ಸಂಬಂಧ ಪೊಲೀಸರು ಐಪಿಸಿಯ ವಿವಿಧ ಸೆಕ್ಷನ್‌ಗಳಡಿ ಆರೋಪಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.   

ದೂರಿನಲ್ಲೇನಿದೆ?: 2020ರಲ್ಲಿ ವೈದ್ಯೆ ಬೆಂಗಳೂರಿನಲ್ಲಿ ವಾಸವಿದ್ದಾಗ ಆರೋಪಿ ವಿನೋದ್‌ ಪರಿಚಯವಾಗಿದ್ದ. ನಂತರ ಕಿರುಕುಳ ನೀಡಲಾರಂಭಿಸಿದ್ದ. ವೈದ್ಯೆ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.  

‘ತನ್ನ ಬಳಿ ಅಶ್ಲೀಲ ಪೋಟೊಗಳಿದ್ದು, ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಡುವುದಾಗಿ ಹೇಳಿ ಹಿಂಸೆ ನೀಡುತ್ತಿದ್ದ. ಮೇ 23ರಂದು ವೈದ್ಯೆಗೆ ಕರೆ ಮಾಡಿದ್ದ ಆರೋಪಿ, ‘ಗೂಂಡಾಗಳನ್ನು ಬಿಟ್ಟು ನಿನ್ನ ಕ್ಲಿನಿಕ್ ಮೇಲೆ ದಾಳಿ ಮಾಡಿಸುತ್ತೇನೆ. ಅತ್ಯಾಚಾರ ಮಾಡಿಸುತ್ತೇನೆ. ನಿನ್ನನ್ನು ಜೀವಂತವಾಗಿ ಬಿಡುವುದಿಲ್ಲ’ ಎಂದು ಜೀವಬೆದರಿಕೆ ಹಾಕಿದ್ದಾನೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ನಿನ್ನ ಮಗನ ಹೆಸರಿನಲ್ಲಿರುವ ಮನೆಯನ್ನು ನನ್ನ ಹೆಸರಿಗೆ ಮಾಡಿಕೊಡಬೇಕು, ₹45 ಲಕ್ಷ ಹಣ ಕೊಡಬೇಕು’ ಎಂದು ಕೇಳಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.  ಈ ದೂರಿನ ಮೇರೆಗೆ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಆರೋಪಿಯನ್ನು ಇನ್ನಷ್ಟೇ ಬಂಧಿಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT