ಕಂಪ್ಲಿ(ಬಳ್ಳಾರಿ) : ಬಳ್ಳಾರಿ ಜಿಲ್ಲೆಯ ಕಂಪ್ಲಿ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ ಧಾರವಾಡ ಹೈಕೋರ್ಟ್ ಪೀಠ ಬುಧವಾರ ತಡೆಯಾಜ್ಞೆ ನೀಡಿದೆ.

ಸರ್ಕಾರ ಇತ್ತೀಚೆಗೆ ಹೊರಡಿಸಿದ್ದ ಮೀಸಲಾತಿ ಪಟ್ಟಿಯಲ್ಲಿ ಪುರಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ(ಮಹಿಳೆ)ಕ್ಕೆ ಸಿಕ್ಕಿತ್ತು. ಆ. 21ಕ್ಕೆ ಚುನಾವಣೆ ನಿಗದಿಯಾಗಿತ್ತು.

ಸರದಿ(ರೊಟೆಶನ್) ಪ್ರಕಾರ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಬೇಕಿತ್ತು ಎಂದು ಪುರಸಭೆ ಸದಸ್ಯ ಎನ್. ರಾಮಾಂಜನೇಯಲು ಧಾರವಾಡ ಹೈಕೋರ್ಟ್‍ಗೆ ಪೂರಕ ದಾಖಲೆ ಸಲ್ಲಿಸಿದ್ದರು. ಹೈಕೋರ್ಟ್ ಪರಿಶೀಲನೆ ಬಳಿಕ ತಡೆಯಾಜ್ಞೆ ನೀಡಿದೆ. ಮುಂದಿನ ವಿಚಾರಣೆ ಆ.28ಕ್ಕೆ ನಿಗದಿಯಾಗಿದೆ.

17ತಿಂಗಳ ನಂತರ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಿಗದಿಯಾಗುತ್ತಿದ್ದಂತೆ ಆಕಾಂಕ್ಷಿ ಅಭ್ಯರ್ಥಿಗಳು ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಏಕಾಏಕಿ ತಡೆಯಾಜ್ಞೆ ಬಂದಿದ್ದರಿಂದ ಆಕಾಂಕ್ಷಿಗಳಿಗೆ ಆಶಾಭಂಗವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.