ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಎಚ್‌ಐವಿ ಸೋಂಕಿತರನ್ನು ಮನುಷ್ಯರಂತೆ ಕಾಣಬೇಕು’

Last Updated 1 ಡಿಸೆಂಬರ್ 2022, 15:41 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಎಚ್‌ಐವಿ ಸೋಂಕಿತರನ್ನು ಮನುಷ್ಯರಂತೆ ಕಾಣಬೇಕು. ಅಸ್ಪೃಶ್ಯರಂತೆ ಕಾಣಬಾರದು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್‌ ಭೋಯರ್‌ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಗುರುವಾರ ನಗರದ ರೋಟರಿ ಕ್ಲಬ್‌ನಲ್ಲಿ ಏರ್ಪಡಿಸಿದ್ದ ವಿಶ್ವ ಏಡ್ಸ್‌ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

‘ಎಚ್‌ಐವಿ ಪೀಡಿತರಿಗೆ ಎಲ್ಲ ಸೇವಾ ಸೌಲಭ್ಯ ಒದಗಿಸಿ ಸಮಾಜದ ಮುಖ್ಯ ವಾಹಿನಿಗೆ ತರಬೇಕು. ಸರ್ಕಾರ ಅನೇಕ ಸೌಲಭ್ಯಗಳನ್ನು ಕೊಡುತ್ತಿದೆ. ಜಿಲ್ಲೆಯಲ್ಲಿ 2017 ರಿಂದ ಅಕ್ಟೋಬರ್ 2022ರ ವರೆಗೆ 4,42,237 ಜನರಿಗೆ ಐ.ಸಿ.ಟಿ.ಸಿ ಕೇಂದ್ರಗಳಲ್ಲಿ ಆಪ್ತಸಮಾಲೋಚನೆ ನಡೆಸಿ ರಕ್ತ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 1502 ಜನರಿಗೆ ಎಚ್.ಐ.ವಿ ಸೋಂಕು ಇರುವುದು ದೃಢಪಟ್ಟಿದೆ ಎಂದರು.

ಎಚ್‍ಐವಿ ಸೋಂಕಿಗೆ ಒಳಗಾಗುವ ಹೆಚ್ಚು ಅಪಾಯದ ಅಂಚಿನಲ್ಲಿರುವ ಮತ್ತು ಸಮಾಜದಿಂದ ಉಪೇಕ್ಷಿತವಾಗಿರುವ ಲೈಂಗಿಕ ವೃತ್ತಿಯಲ್ಲಿರುವ ಮಹಿಳೆಯರು, ವಲಸೆ ಹೋಗುವವರು, ಲೈಂಗಿಕ ಸೋಂಕಿಗೆ ಒಳಗಾಗಿರುವವರು, ಇತರರನ್ನು ಗುರುತಿಸಿ ಅವರಿಗೆ ನಿರ್ದಿಷ್ಟವಾಗಿ ಗಮನ ಹರಿಸಲಾಗುತ್ತಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ನಗರದ ಡಿಎಚ್‌ಒ ಕಚೇರಿಯಿಂದ ರೋಟರಿ ಕ್ಲಬ್‌ ವರೆಗೆ ಜಾಗೃತಿ ಜಾಥಾ ನಡೆಯಿತು. ನಗರಸಭೆ ಅಧ್ಯಕ್ಷೆ ಸುಂಕಮ್ಮ, ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಕಿಶನ್‌ ಮಾಡಲಗಿ ಚಾಲನೆ ನೀಡಿದರು. ನಗರಸಭೆ ಉಪಾಧ್ಯಕ್ಷ ಎಲ್‌.ಎಸ್‌. ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಲೀಂ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ, ಆರೋಗ್ಯ ನಿರೀಕ್ಷಣ ಅಧಿಕಾರಿ ಎಂ. ಧರ್ಮನಗೌಡ, ರೋಟರಿ ಕ್ಲಬ್‌ನ ಸತ್ಯನಾರಾಯಣ, ರಾಘವೇಂದ್ರ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT