ಹೂವಿನಹಡಗಲಿ: ಇಲ್ಲಿನ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಜ. 30 ರಂದು ನಿಗದಿಯಾಗಿದೆ. ದಿನಾಂಕ ಪ್ರಕಟವಾದ ಬೆನ್ನಲ್ಲೇ ಕಾಂಗ್ರೆಸ್, ಬಿಜೆಪಿಯ 12 ಸದಸ್ಯರು ಒಟ್ಟಾಗಿ ಅಜ್ಞಾತ ಸ್ಥಳಕ್ಕೆ ತೆರಳಿರುವುದು ಕುತೂಹಲ ಕೆರಳಿಸಿದೆ.

2019ರಲ್ಲಿ ನಡೆದ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 14 ಸ್ಥಾನಗಳಲ್ಲಿ ಗೆದ್ದು ಬಹುಮತ ಗಳಿಸಿದ್ದರೆ, ಬಿಜೆಪಿ 9 ಸ್ಥಾನಗಳಲ್ಲಿ ಗೆದ್ದಿದೆ. ಬದಲಾದ ರಾಜಕೀಯದಲ್ಲಿ ಎರಡೂ ಪಕ್ಷಗಳ ಕೆಲವು ಸದಸ್ಯರು ‘ನಿಷ್ಠೆ’ ಬದಲಿಸಿ ಎದುರಾಳಿ ಗುಂಪುಗಳಲ್ಲಿ ಗುರುತಿಸಿಕೊಂಡಿದ್ದಾರೆ.

ಇದೀಗ ಬಿಜೆಪಿ, ಕಾಂಗ್ರೆಸ್ ನ 12 ಸದಸ್ಯರು ಅಜ್ಞಾತ ಸ್ಥಳಕ್ಕೆ ಪ್ರವಾಸ ತೆರಳಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು, ಕೆಲವು ಸದಸ್ಯರ ಮೊಬೈಲ್ಗಳು ನಾಟ್ ರೀಚೆಬಲ್ ಆಗಿವೆ.

ಎರಡನೇ ಅವಧಿಯ ಅಧ್ಯಕ್ಷ ಸ್ಥಾನ ಒಬಿಸಿ ‘ಎ’ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಒಬಿಸಿ ‘ಬಿ’ ವರ್ಗಕ್ಕೆ ಮೀಸಲಾಗಿದೆ. ಕಳೆದ ಆಗಸ್ಟ್ನಲ್ಲಿ ಪ್ರಕಟವಾಗಿದ್ದ ಈ ಮೀಸಲಾತಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲ ಸದಸ್ಯರು ನ್ಯಾಯಾಲಯ ಮೆಟ್ಟಿಲೇರಿದ್ದರಿಂದ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಇದೀಗ ತಡೆಯಾಜ್ಞೆ ತೆರವಾಗಿದ್ದು, ಹಿಂದೆ ಪ್ರಕಟವಾಗಿದ್ದ ಮೀಸಲಾತಿ ಪ್ರಕಾರವೇ ಚುನಾವಣೆ ನಡೆಸಲು ಕೋರ್ಟ್ ಸಮ್ಮತಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.