ಸೋಮವಾರ, ನವೆಂಬರ್ 28, 2022
20 °C

ಹೊಸಪೇಟೆ: ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ನಗರದ ವಿಜ್ಞಾನ ಕಾಲೇಜಿನಲ್ಲಿ ಶನಿವಾರ ನಡೆಯಿತು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷೆ ಸುಂಕಮ್ಮ ಉದ್ಘಾಟಿಸಿದರು.

ನಗರಸಭೆ ಉಪಾಧ್ಯಕ್ಷ ಎಲ್.ಎಸ್.ಆನಂದ್ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ. ಈ ವೇದಿಕೆ ಮೂಲಕ ಮಕ್ಕಳ ಕಲೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಅಳೆದು ಪ್ರೋತ್ಸಾಹಿಸಲು ಉತ್ತಮ ಅವಕಾಶ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಚನ್ನಬಸಪ್ಪ ಮಾತನಾಡಿ, ಕಳೆದ 2 ವರ್ಷ ಕೋವಿಡ್ ಹಿನ್ನಲೆಯಲ್ಲಿ ಮಕ್ಕಳ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮಕ್ಕಳಲ್ಲಿ ಚೈತನ್ಯ ತುಂಬಲು ಹಾಗೂ ಮಕ್ಕಳ ಪ್ರತಿಭೆ ಪುರಸ್ಕಾರಕ್ಕಾಗಿ ಪ್ರತಿಭಾ ಕಾರಂಜಿ ಏರ್ಪಡಿಸಲಾಗಿದೆ. ತಾಲ್ಲೂಕಿನ 1,256 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದು ಇದರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವವರಿದ್ದಾರೆ ಎಂದು ಹೇಳಿದರು.

ಕ್ಷೇತ್ರ ಸಮನ್ವಯ ಅಧಿಕಾರಿ ಶಿವಕುಮಾರ್, ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜ್ ಜತ್ತಿ, ಕಂಪ್ಲಿಯ ಹೇಮಯ್ಯ ಸ್ವಾಮಿ, ವಿಜ್ಞಾನ ಶಾಲೆಯ ಮುಖ್ಯ ಶಿಕ್ಷಕ ವಿದ್ಯಾಧರ, ಪ್ರೌಢ ಶಾಲೆಯ ಮುಖ್ಯಗುರುಗಳ ಸಂಘದ ಅಧ್ಯಕ್ಷ ಅಕ್ಕಮಹಾದೇವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಕೆ., ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗನಗೌಡ ಎಂ.ಎ., ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕಡ್ಲಿ ವೀರಭದ್ರೇಶ್, ರಾಜ್ಯ ಪರಿಷತ್ ಸದಸ್ಯ ಎಸ್.ಬಸವರಾಜ್, ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಕುಮಾರ ಸ್ವಾಮಿ, ಸಾವಿತ್ರಿಬಾ ಫುಲೆ ಸಂಘದ ಜಿಲ್ಲಾಧ್ಯಕ್ಷೆ ಉಮಾದೇವಿ, ಶಿಕ್ಷಣ ಸಂಯೋಜಕ ಕೆ.ಮಲ್ಲೇಶಪ್ಪ, ಎಚ್.ಶಿವರಾಮಪ್ಪ, ಬಡ್ತಿ ಮುಖ್ಯಗುರುಗಳ ಸಂಘದ ಅಧ್ಯಕ್ಷೆ ರೇಣುಕಾ ಟಪಾಲ್, ಸಂಘದ ಕಾರ್ಯದರ್ಶಿ ಮಲ್ಲಯ್ಯ, ಶೇಖರ ಗಿರಡ್ಡಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.