ಹೊಸಪೇಟೆ (ವಿಜಯನಗರ): ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯ ಬುಡಕಟ್ಟು ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಮಲ್ಲಿಕಾರ್ಜುನ ಮರಬದ (34) ಹೃದಯಾಘಾತದಿಂದ ಶುಕ್ರವಾರ ನಿಧನರಾದರು.
ಮೃತರು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಗುಳೇದಗುಡ್ಡದವರು. ಮೃತರಿಗೆ ಪತ್ನಿ, ಮಗ ಇದ್ದಾನೆ. ಬುಡಕಟ್ಟು ಅಧ್ಯಯನ ವಿಭಾಗದಲ್ಲಿ ಅಂತಿಮ ವರ್ಷದ ಪಿಎಚ್.ಡಿ ಅಧ್ಯಯನ ಮಾಡುತ್ತಿದ್ದರು.