ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೂವಿನಹಡಗಲಿ: ಹೊಸಪೇಟೆ-ಬೆಳಗಾವಿ ನೂತನ ಬಸ್ ಮಾರ್ಗಕ್ಕೆ ಚಾಲನೆ

Published 15 ಜೂನ್ 2024, 15:53 IST
Last Updated 15 ಜೂನ್ 2024, 15:53 IST
ಅಕ್ಷರ ಗಾತ್ರ

ಹೂವಿನಹಡಗಲಿ: ತಾಲ್ಲೂಕಿನ ಉತ್ತಂಗಿ ಗ್ರಾಮದಲ್ಲಿ ಹೊಸಪೇಟೆ-ಬೆಳಗಾವಿ ನೂತನ ಬಸ್ ಮಾರ್ಗಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಗ್ರಾಮಸ್ಥರು ಬಸ್‌ಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ‘ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಇಟ್ಟಿಗಿ, ಉತ್ತಂಗಿ ಹೂವಿನಹಡಗಲಿ, ಮುಂಡರಗಿ, ಗದಗ ಮೂಲಕ ಬೆಳಗಾವಿಗೆ ಬಸ್ ಮಾರ್ಗ ಆರಂಭಿಸಲಾಗಿದೆ’ ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದರು.

‘ಹೊಸಪೇಟೆ ಸಾರಿಗೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಉತ್ತಂಗಿ ಸುತ್ತಮುತ್ತ ಗ್ರಾಮಗಳ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ ಬೆಳಗಾವಿ ಬಸ್ ಮಾರ್ಗ ಆರಂಭಿಸಿದ್ದಾರೆ. ಹುಬ್ಬಳ್ಳಿ, ಧಾರವಾಡ, ಬೆಳಗಾವಿಗೆ ತೆರಳುವ ವಿದ್ಯಾರ್ಥಿಗಳು, ವರ್ತಕರು, ರೋಗಿಗಳಿಗೆ ಅನುಕೂಲವಾಗಿದೆ. ಈ ಭಾಗದ ಜನರ ಬೇಡಿಕೆ ಈಡೇರಿಸಿದ ಅಧಿಕಾರಿಗಳನ್ನು ಅಭಿನಂದಿಸುತ್ತೇವೆ’ ಎಂದು ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಎಂ. ಸಿದ್ದೇಶ ಹೇಳಿದರು.

ಗ್ರಾಮದ ಮುಖಂಡರಾದ ಕರಿಗಾರ ಕೊಟ್ರಪ್ಪ, ಪಿ.ಪಂಪಣ್ಣ, ಮೂಲಿಮನಿ ಶರಣಪ್ಪ, ಪ್ರಭು ಕಬ್ಬಜ್ಜಿ, ಕೆ.ವೀರಣ್ಣ, ದಾನನಗೌಡ, ಎಸ್.ಎಂ.ವೀರಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT