ಹೊಸಪೇಟೆ: ಪಿಯುಸಿ ಮತ್ತು ಪದವಿ ಪ್ರವೇಶ ಶುಲ್ಕ ಹೆಚ್ಚಿಸಿರುವುದನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

‘ಪಿಯುಸಿ, ಪದವಿ ಪ್ರವೇಶಕ್ಕೆ ಸರ್ಕಾರ ಈಗಾಗಲೇ ಶುಲ್ಕ ನಿಗದಿಪಡಿಸಿದೆ. ಹೀಗಿದ್ದರೂ ಖಾಸಗಿ ಕಾಲೇಜುಗಳು ಹೆಚ್ಚಿನ ಶುಲ್ಕವನ್ನು ವಿದ್ಯಾರ್ಥಿಗಳಿಂದ ಪಡೆಯುತ್ತಿವೆ. ಸರ್ಕಾರದ ನಿಯಮವನ್ನು ಗಾಳಿಗೆ ತೂರಿ ಮನಬಂದಂತೆ ವರ್ತಿಸುತ್ತಿರುವ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

‘ಕೊರೊನಾ ಲಾಕ್‌ಡೌನ್‌ನಿಂದ ಬಡವರು, ಮಧ್ಯಮ ವರ್ಗದವರು, ರೈತರು ಬಹಳ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರ ಮೇಲೆ ಹೆಚ್ಚಿನ ಹೊರೆ ಬೀಳಬಾರದು ಎಂಬ ಕಾರಣಕ್ಕಾಗಿ ಸರ್ಕಾರ ಶುಲ್ಕ ನಿಗದಿಪಡಿಸಿದೆ. ಆದರೆ, ಅದಕ್ಕೆ ಖಾಸಗಿ ಕಾಲೇಜುಗಳು ಕಿಮ್ಮತ್ತು ಕೊಡುತ್ತಿಲ್ಲ’ ಎಂದು ಆರೋಪಿಸಿದ್ದಾರೆ.

ಫೆಡರೇಶನ್ ತಾಲ್ಲೂಕು ಅಧ್ಯಕ್ಷ ಜೆ. ಶಿವಕುಮಾರ, ಕಾರ್ಯದರ್ಶಿ ಎಚ್.ಎಂ. ಮಾರುತಿ, ಇ. ಗಣೇಶ್ ಸೇರಿದಂತೆ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.