ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಕಿ ಅನಾಹುತ; ಮನೆ ಭಸ್ಮ

Published 17 ಆಗಸ್ಟ್ 2023, 23:05 IST
Last Updated 17 ಆಗಸ್ಟ್ 2023, 23:05 IST
ಅಕ್ಷರ ಗಾತ್ರ

ಕಾನಹೊಸಹಳ್ಳಿ: ಸಮೀಪದ ಓಬಳಶೆಟ್ಟಿಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದಾಗಿ ವಾಸದ ಮನೆಯೊಂದು ಸುಟ್ಟಿರುವ ಘಟನೆ ಗುರುವಾರ ಸಂಭವಿಸಿದೆ.

ಗ್ರಾಮದ ಗೊಲ್ಲರ ನಿಂಗಮ್ಮ ಎಂಬುವರ ಮನೆಯೇ ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ಮೊತ್ತದ ಸರಕುಗಳು ನಷ್ಟವಾಗಿವೆ. ಮನೆಯಲ್ಲಿ ಯಾರು ಇಲ್ಲದೆರುವಾಗ ಅಲ್ಲದೆ ಜಮೀನಿನಲ್ಲಿ ಕೆಲಸ ಮಾಡಲು ಹೋದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

ಗ್ರಾಮಸ್ಥರು ಬೆಂಕಿಯನ್ನು ನಂದಿಸಲು ಪ್ರಯತ್ನಪಟ್ಟರೂ ಪ್ರಯೋಜನವಾಗಿಲ್ಲ. ಅಗ್ನಿಶಾಮಕದಳದ ಸಿಬ್ಬಂದಿ ಬರುವಷ್ಟರಲ್ಲಿ ಮನೆಯು ಭಾಗಶಃ ಸುಟ್ಟುಹೋಗಿತು.

ಗ್ರಾಮಸ್ಥರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸೇರಿ ಬೆಂಕಿಯನ್ನು ನಂದಿಸುವ ಮೂಲಕ ಅಕ್ಕಪಕ್ಕದ ಮನೆಗಳಿಗೆ ಆಗಬಹುದಾದ ಭಾರೀ ಅವಘಡ ತಪ್ಪಿಸಿದ್ದಾರೆ. ಅಲ್ಲದೆ ಮನೆಯಲ್ಲಿದ್ದ ದವಸ ಧಾನ್ಯ, ಪೀಠೋಪಕರಣಗಳು, ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT