ಹೂವಿನಹಡಗಲಿ: ತಾಲ್ಲೂಕಿನಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಂಭವವಿದ್ದು, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳು 34 ಸಮಸ್ಯಾತ್ಮಕ ಹಳ್ಳಿಗಳನ್ನು ಗುರುತಿಸಿ ತಾಲ್ಲೂಕು ಆಡಳಿತಕ್ಕೆ ಸಲ್ಲಿಸಿದ್ದಾರೆ.

ತಾಲ್ಲೂಕಿನಲ್ಲಿ 11 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿದ್ದು, ನದಿಯಲ್ಲಿ ನೀರು ಇಳಿಕೆಯಾಗಿರುವುದರಿಂದ ಹೊಳಗುಂದಿ ಹಾಗೂ ಅಂಕ್ಲಿ-ಕೊಂಬಳಿಯ ಎರಡು ಬಹುಗ್ರಾಮ ಯೋಜನೆಗಳು ಸ್ಥಗಿತಗೊಂಡಿವೆ. ತಾಲ್ಲೂಕಿನಲ್ಲಿ ಕುಡಿಯುವ ನೀರಿನ 493 ಕೊಳವೆ ಬಾವಿಗಳ ಪೈಕಿ ಅಧಿಕ ಪ್ಲೋರೈಡ್ ಹಾಗೂ ಕುಡಿಯುವ ನೀರಿಗೆ ಯೋಗ್ಯವಿಲ್ಲದ 111 ಬೋರ್ ವೆಲ್ ಗಳನ್ನು ಬಂದ್ ಮಾಡಲಾಗಿದೆ. 382 ಕೊಳವೆಬಾವಿಗಳು ಚಾಲನೆಯಲ್ಲಿವೆ ಎಂದು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಉಪ ವಿಭಾಗದ ಎಇಇ ಪ್ರದೀಪಕುಮಾರ್ ಮಾಹಿತಿ ನೀಡಿದ್ದಾರೆ.

‘ತಾಲ್ಲೂಕಿನ 14 ಗ್ರಾಮ ಪಂಚಾಯಿತಿ ವ್ಯಾಪ್ತಿಯ 34 ಗ್ರಾಮಗಳಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಂಭವವಿದೆ. ಬೇಸಿಗೆ ನಿರ್ವಹಣೆಗೆ ಕ್ರಿಯಾ ಯೋಜನೆ ರೂಪಿಸಿ, ಮೇಲಧಿಕಾರಿಗಳಿಗೆ ಸಲ್ಲಿಸಿದ್ದೇವೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.