ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ | ಅಕ್ರಮ ಮದ್ಯ ಸಾಗಾಣೆ: ಪ್ರಕರಣ ದಾಖಲು

Published 1 ಏಪ್ರಿಲ್ 2024, 15:41 IST
Last Updated 1 ಏಪ್ರಿಲ್ 2024, 15:41 IST
ಅಕ್ಷರ ಗಾತ್ರ

ಬಳ್ಳಾರಿ: ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವ್ಯಕ್ತಿಯೊಬ್ಬನನ್ನೂ ವಶಕ್ಕೆ ಪಡೆಯಲಾಗಿದೆ. 

ಸಂಡೂರು ತಾಲ್ಲೂಕಿನ ಬನ್ನಿಹಟ್ಟಿ ಗ್ರಾಮದಿಂದ ಲಿಂಗದಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ರಸ್ತೆಗಾವಲು ಸಮಯದಲ್ಲಿ ಕಪ್ಪು ಬಣ್ಣದ ಹೊಂಡಾ ದ್ವಿಚಕ್ರ ವಾಹನದಲ್ಲಿ 8.640 ಲೀಟರ್ (ಅಂದಾಜು ಮೌಲ್ಯ ₹53,840) ಮದ್ಯ ಸಾಗಿಸುತ್ತಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದರು. ನಂತರ ವಾಹನ ಸವಾರನ್ನು ವಶಕ್ಕೆ ಪಡೆದುಕೊಂಡು, ಮದ್ಯ ಹಾಗೂ ವಾಹನವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT