ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ | ಅಕ್ರಮ ಲೈಂಗಿಕ ಚಟುವಟಿಕೆ: ಮಹಿಳೆ ಬಂಧನ

Published 18 ಮಾರ್ಚ್ 2024, 6:31 IST
Last Updated 18 ಮಾರ್ಚ್ 2024, 6:31 IST
ಅಕ್ಷರ ಗಾತ್ರ

ಬಳ್ಳಾರಿ: ಅಕ್ರಮ ಲೈಂಗಿಕ ಚಟುವಟಿಕೆ, ಮಹಿಳೆಯರ ಸಾಗಣೆ ಮಾಡುತ್ತಿದ್ದ ಅರೋಪದ ಮೇಲೆ ಮಹಿಳೆಯೊಬ್ಬರನ್ನು ನಗರದ ಕೌಲ್‌ಬಜಾರ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಬಂಡಿಹಟ್ಟಿ ಗ್ರಾಮದ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದ ಬಂಧಿತ ಮಹಿಳೆ, ಅಲ್ಲಿಗೆ ಬೇರೆ ಬೇರೆ ಕಡೆಗಳಿಂದ ಮಹಿಳೆಯರನ್ನು ಸಾಗಣೆ ಮಾಡುತ್ತಿರುವುದಾಗಿಯೂ, ಮಹಿಳೆಯರನ್ನು ಅಕ್ರಮ ಲೈಂಗಿಕ ಚಟುವಟಿಕೆ ಬಳಸಿಕೊಂಡು ಹಣ ಸಂಪಾದನೆ ಮಾಡುತ್ತಿರುವುದಾಗಿಯೂ ಪೊಲೀಸರಿಗೆ ಮಾಹಿತಿ ದೊರೆತಿತ್ತು ಎನ್ನಲಾಗಿದೆ. 

ಈ ಹಿನ್ನೆಲೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದರು. ಅಕ್ರಮ ಲೈಂಗಿಕ ಚಟುವಟಿಕೆ ನೆಡೆಸುತ್ತಿರುವ ಆರೋಪದ ಮೇಲೆ ಮಹಿಳೆಯ ವಿರುದ್ಧ ಐಟಿಪಿ(ಅನೈತಿ ಸಾಗಣೆ ತಡೆ) ಕಾಯ್ದೆ ಅಡಿ ಮತ್ತು ಐಪಿಸಿ 370 ಅಡಿಯಲ್ಲಿ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT