ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಕ್ರಮ ದಾಸ್ತಾನು: 10 ಕ್ವಿಂಟಾಲ್‌ ಪಡಿತರ ಅಕ್ಕಿ ವಶ

Published 9 ಜೂನ್ 2024, 16:25 IST
Last Updated 9 ಜೂನ್ 2024, 16:25 IST
ಅಕ್ಷರ ಗಾತ್ರ

ಬಳ್ಳಾರಿ: ಜಿಲ್ಲೆಯ ಅಸುಂಡಿ ಗ್ರಾಮದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 10.85 ಕ್ವಿಂಟಾಲ್‌ ಪಡಿತರ ಅಕ್ಕಿಯನ್ನು ಜಿಲ್ಲಾ ಆಹಾರ ನಿರೀಕ್ಷಕರು ಶನಿವಾರ ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಅಕ್ಕಿಯ ಮೌಲ್ಯ ₹36,890 ಎಂದು ಅಂದಾಜಿಸಲಾಗಿದೆ. ಇದರ ಜತೆಗೆ ಸ್ಥಳದಲ್ಲಿದ್ದ ₹2 ಲಕ್ಷ ಮೌಲ್ಯದ ಸರಕು ಸಾಗಣೆ ವಾಹನವನ್ನೂ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಪಿ.ಡಿ ಹಳ್ಳಿ ಠಾಣೆಯಲ್ಲಿ ಅಗತ್ಯ ಸರಕುಗಳ ಕಾಯಿದೆ–1955, ಕರ್ನಾಟಕ ಅಗತ್ಯ ಸರಕುಗಳ ಕಾಯ್ದೆ–1981, ನಿಯಂತ್ರಣಾ ಕಾಯ್ದೆ –2016ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. 

ಅಸುಂಡಿ ಗ್ರಾಮದಲ್ಲಿ ಪಡಿತರ ಅಕ್ಕಿಯನ್ನು ಸಾರ್ವಜನಿಕರಿಂದ ಕಡಿಮೆ ಬೆಲೆಗೆ ಅಕ್ರಮವಾಗಿ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ದಾಸ್ತಾನು ಮಾಡಿರುವ ಬಗ್ಗೆ ಆಹಾರ ನಿರೀಕ್ಷಕರಿಗೆ ಖಚಿತ ಮಾಹಿತಿ ಸಿಕ್ಕಿತ್ತು.  

ಈ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ವಾಹನ ಚಾಲಕ ಗಿರೀಶ್‌ ರವಿಚಂದ್ರ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT