ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ | ಪಡಿತರ ಅಕ್ಕಿ ಅಕ್ರಮ ದಾಸ್ತಾನು; ವಶ

Published 16 ಮೇ 2024, 14:21 IST
Last Updated 16 ಮೇ 2024, 14:21 IST
ಅಕ್ಷರ ಗಾತ್ರ

ಬಳ್ಳಾರಿ: ನಗರದ ಹೊರವಲಯದ ಗುಗ್ಗರಹಟ್ಟಿಯ ನ್ಯಾಯಬೆಲೆ ಅಂಗಡಿ 115ರ ಪಕ್ಕದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 750 ಚೀಲ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ಅಕ್ರಮವಾಗಿ ದಾಸ್ತಾನು ಮಾಡಿದ್ದ ನ್ಯಾಯಬೆಲೆ ಅಂಗಡಿಯ ಪರವಾನಗಿ ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.  ಅಕ್ಕಿ ಸಾಗಣೆಗೆ ಬಳಸಲಾಗುತ್ತಿದ್ದ ಲಾರಿಯನ್ನು ಬಳ್ಳಾರಿ ನಗರದ ಎಪಿಎಂಸಿ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡು ಎಫ್‍ಐಆರ್ ದಾಖಲಿಸಲಾಗಿದೆ.

ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ ಹಾಗೂ ಆಹಾರ ಇಲಾಖೆ ಉಪನಿರ್ದೇಶಕಿ ಸಕೀನಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT