ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಗರದ ಗಡಿಗಿ ಚೆನ್ನಪ್ಪ (ರಾಯಲ್) ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟಿಸಿದರು.

ಮಾನವ ಸರಪಳಿ ನಿರ್ಮಿಸಿದ ಮುಖಂಡರು, ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು.

‘ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರೇ ಸರ್ಕಾರಕ್ಕೆ ದೂರು ನೀಡಿದ್ದಾರೆ. ಬುಡಾದಲ್ಲಿ ಬಡ ಜನರ ಯಾವುದೇ ಕೆಲಸಗಳು ಆಗುತ್ತಿಲ್ಲ. ದುಡ್ಡು ಕೊಟ್ಟರೆ ಮಾತ್ರ ಕೆಲಸ ಮಾಡಿ ಕೊಡುವ ಪದ್ಧತಿ ಬೆಳೆದುಕೊಂಡಿದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.

‘ಬಳ್ಳಾರಿ ಕಾಂಗ್ರೆಸ್ ಪಾಳಯದಲ್ಲಿ ಶೀತಲ ಸಮರ ಪ್ರಾರಂಭವಾಗಿದೆ. ಅವರ ಜಗಳದಿಂದ ಬಡ ಜನರಿಗೆ ತೊಂದರೆ ಆಗುತ್ತಿದೆ. ಹೀಗಾಗಿ ಈ ಭ್ರಷ್ಟಾಚಾರದ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಬುಡಾ ಅಧ್ಯಕ್ಷರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರತಿ ಜಿಲ್ಲೆ, ಗ್ರಾಮಗಳಲ್ಲಿ ಭ್ರಷ್ಟಾಚಾರಕ್ಕೆ ನಿಂತಿದೆ. ಮುಡಾ, ಬುಡಾ ಸೈಟು ಹಂಚಿಕೆಗಳಲ್ಲಿ ಆಗಿರುವ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ಆಗಬೇಕು. ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಬೇಕು’ ಎಂದರು.

ಬಿಜೆಪಿ ಮುಖಂಡರಾದ ಶ್ರೀನಿವಾಸ್ ಮೋತ್ಕರ್, ಮಲ್ಲೇಶ್, ಗಾಂದಿಲಿಂಗ, ಸುಗುಣಾ, ಸುಮಾ, ಪುಷ್ಪಲತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.