ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರ ಕಾಲೇಜು ಕೊಕ್ಕೊ ಟೂರ್ನಿ: ಬಳ್ಳಾರಿ, ಗಂಗಾವತಿ ಕಾಲೇಜು ಚಾಂಪಿಯನ್

Published 12 ಡಿಸೆಂಬರ್ 2023, 15:55 IST
Last Updated 12 ಡಿಸೆಂಬರ್ 2023, 15:55 IST
ಅಕ್ಷರ ಗಾತ್ರ

ಕೂಡ್ಲಿಗಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂತರ ಕಾಲೇಜು ಕೊಕ್ಕೊ ಟೂರ್ನಿಯ ಮಹಿಳಾ ವಿಭಾಗದಲ್ಲಿ ಬಳ್ಳಾರಿಯ ಎಸ್‍ಎಸ್‍ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಪುರುಷರ ವಿಭಾಗದಲ್ಲಿ ಗಂಗಾವತಿಯ ಎಸ್‍ಕೆಎನ್‍ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡ ಅಂತರ ಕಾಲೇಜು ಕೊಕ್ಕೊ ಚಂಪಿಯನ್ ಅಗಿ ಹೊರ ಹಮ್ಮಿದ್ದಾರೆ.

ಪಟ್ಟಣದ ಎಸ್‍ಎವಿಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಅಂತಿಮ ಪಂದ್ಯದಲ್ಲಿ ಮಹಿಳೆಯರ ವಿಭಾಗದಲ್ಲಿ ಬಳ್ಳಾರಿಯ ಎಸ್‍ಎಸ್‍ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡ ಬಳ್ಳಾರಿಯ ಎಸ್‍ಜಿಆರ್‌ಸಿಎಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದರು. ತವರಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡ ತೃತೀಯ ಸ್ಥಾನ ಪಡೆಯಿತು.

ಪುರುಷರ ವಿಭಾಗದಲ್ಲಿ ಗಂಗಾವತಿಯ ಎಸ್‍ಕೆಎನ್‍ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡ ಬಳ್ಳಾರಿಯ ಎಸ್‍ಎಸ್‍ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಅಂತರ ಕಾಲೇಜು ಚಂಪಿಯನ್ ಅಗಿ ಹೊರಹೊಮ್ಮಿತು.

ಕೂಡ್ಲಿಗಿಯ ಎಸ್ ಎವಿಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತೀಯ ಸ್ಥಾನ ಪಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT