ಬಳ್ಳಾರಿ: ‘ರಾಜ್ಯ ಸರ್ಕಾರ 56,342 ಹುದ್ದೆಗಳ ಭರ್ತಿಯ ವೇಳೆ ಪರಿಶಿಷ್ಟ ಜಾತಿಗಳ ಶೇ 15ರ ಒಳ ಮೀಸಲಾತಿಯನ್ನು ಪಾಲಿಸಬೇಕು’ ಎಂದು ಆಗ್ರಹಿಸಿ ಬಳ್ಳಾರಿ ಜಿಲ್ಲಾ ಮಾದಿಗ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.

ನಗರದ ನಾರಾಯಣರಾವ್ ಉದ್ಯಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಗಡಿಗಿ ಚೆನ್ಪಪ್ಪ(ರಾಯಲ್) ವೃತ್ತದ ಮೂಲಕ ಹಳೇ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಬಳಿಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

‘ಸರ್ಕಾರ ಫೆಬ್ರವರಿ 27 ರಂದು ಹೊರಡಿಸಿರುವ ಆದೇಶದಲ್ಲಿ ಒಳ ಮೀಸಲಾತಿಗೆ ಸಂಬಂಧಿಸಿದ ಹಿಂದಿನ ಆದೇಶಗಳನ್ನು ಅನ್ವಯಿಸದೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಸೂಚಿಸಿದೆ. ಇದು ಮಾದಿಗ ಮತ್ತು ಇತರ ಸಮುದಾಯಗಳಿಗೆ ಮಾಡಿದ ಅನ್ಯಾಯ’ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

‘56,342 ಖಾಲಿ ಹುದ್ದೆಗಳ ಭರ್ತಿಯನ್ನು ಶೇ 15ರ ಒಳ ಮೀಸಲಾತಿ ಅನ್ವಯವೇ ಮಾಡಬೇಕು. ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯ ವರ್ಗೀಕರಣದಂತೆ ಪರಿಷ್ಕೃತ ರೋಸ್ಟರ್ ವ್ಯವಸ್ಥೆ ಜಾರಿಗೊಳಿಸಬೇಕು’ ಎಂದು ಆಗ್ರಹಿಸಲಾಗಿದೆ.

‘ಶೇ 56ರ ಮೀಸಲಾತಿ ವ್ಯವಸ್ಥೆಯನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯದ ಮುಂದೆ ಸರ್ಕಾರ ದೃಢವಾದ ವಾದ ಮಂಡಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ವಿಚಾರದಲ್ಲಿ ಸರ್ಕಾರ ತಕ್ಷಣ ಸ್ಪಂದಿಸದಿದ್ದಲ್ಲಿ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ಹೋರಾಟ ಸಮಿತಿ ನೀಡಿದೆ.

ಸಂಘಟನೆ ಮುಖಂಡರಾದ ಈಶ್ವರಪ್ಪ, ಪಂಪಾಪತಿ, ಗಂಗಾಧರ, ದುರುಗಪ್ಪ ತಳವಾರ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.