ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ ಜಮೀರ್‌ಗೆ

Published 21 ಜೂನ್ 2024, 14:26 IST
Last Updated 21 ಜೂನ್ 2024, 14:26 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಜಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ಧಿಗಾರರ ಜತೆ ಮಾತನಾಡಿದ ಅವರು, ‘ವಿಜಯನಗರದ ಜತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಜಮೀರ್ ಅಹಮದ್ ಖಾನ್ ಅವರಿಗೆ ನೀಡಲಾಗುವುದು’ ಎಂದು ಹೇಳಿದರು.

‘ಈ ಕುರಿತು ಅಧಿಕೃತ ಆದೇಶ ನಾಳೆ ಹೊರಡಿಸಲಾಗುವುದು’ ಎಂದ ಅವರು, ತಕ್ಷಣದಿಂದಲೇ ಹೊಣೆಗಾರಿಕೆ ತೆಗೆದುಕೊಳ್ಳುವಂತೆ ಜಮೀರ್ ಅಹಮದ್ ಖಾನ್ ಅವರಿಗೂ ನಿರ್ದೇಶನ ನೀಡಿದರು.

ನಾಗೇಂದ್ರ ರಾಜೀನಾಮೆಯಿಂದ ಬಳ್ಳಾರಿ ಜಿಲ್ಲಾ ಉಸ್ತುವಾರಿ ತೆರವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT