ಕಂಪ್ಲಿ: ‘ಆರ್.ಸಿ.ಬಿ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ’ ಎಂದು ಜೆಡಿಎಸ್ ಯುವ ಘಟಕ ರಾಜ್ಯ ಕಾರ್ಯಾಧ್ಯಕ್ಷ ರಾಜುನಾಯಕ ಅಪಾದಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿ, ಪೂರ್ವ ತಯಾರಿ ಇಲ್ಲದೆ ಕಾರ್ಯಕ್ರಮ ಆಯೋಜಿಸಿದ್ದೇ ಕಾಲ್ತುಳಿತ ದುರಂತಕ್ಕೆ ಕಾರಣ ಎಂದು ತಿಳಿಸಿದ್ದಾರೆ.

ಲಕ್ಷಾಂತರ ಅಭಿಮಾನಿಗಳು ಒಂದೆಡೆ ಸೇರುತ್ತಾರೆ ಎನ್ನುವುದು ಪೊಲೀಸ್ ಇಲಾಖೆಗೆ ಮಾಹಿತಿ ಇದ್ದರೂ ಸೂಕ್ತ ಕ್ರಮವಹಿಸದೆ ತರಾತುರಿಯಲ್ಲಿ ಸಮಾರಂಭ ಆಯೋಜಿಸಿದ್ದು, ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ್ದಾರೆ.

ಈ ಘಟನೆಯಲ್ಲಿ 11 ಜನರು ಪ್ರಾಣ ಕಳೆದುಕೊಂಡಿದ್ದು, ಸುಮಾರು 40 ಜನ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೃತ ಕುಟುಂಬಗಳಿಗೆ ತಲಾ ₹ 50ಲಕ್ಷ ಪರಿಹಾರ ನೀಡಬೇಕು. ಘಟನೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.