ಬಳ್ಳಾರಿ: ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜು ಮತ್ತು ಬಳ್ಳಾರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‍ಮೆಂಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 4ರಂದು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆ ವರೆಗೆ ಜೆಇಇ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಆದೇಶಿಸಿದ್ದಾರೆ.
ಈ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ. ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನಲ್ಲಿರುವ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಸೂಚಿಸಿದ್ದಾರೆ.