ಕೊಟ್ಟೂರು: ‘ಉದ್ಯೋಗ ಖಾತ್ರಿ ಯೋಜನೆಯಡಿ ಪುರುಷರು ಹಾಗೂ ಮಹಿಳೆಯರಿಗೆ ಸಮಾನ ಕೂಲಿ ₹370 ನೀಡಲಾಗುತ್ತದೆ. ಈ ಹಿನ್ನೆಲೆ ನರೇಗಾ ಯೋಜನೆಯ ಉದ್ಯೋಗ ಖಾತ್ರಿ ಕೆಲಸಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು’ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಎಚ್.ವಿಜಯಕುಮಾರ್ ತಿಳಿಸಿದರು.

ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಾಗಟಗೇರಿ ಗ್ರಾಮದ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ತ್ರೀಚೇತನ ಹಾಗೂ ನರೇಗಾ ಉದ್ಯೋಗ ಚೀಟಿ ಪರಿಷ್ಕರಣೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಒಂದು ಉದ್ಯೋಗ ಚೀಟಿಗೆ ಆರ್ಥಿಕ ವರ್ಷದಲ್ಲಿ 100 ಮಾನವ ದಿನಗಳನ್ನು ನೀಡಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಉಮಾಪತಿ, ಐ.ಇ.ಸಿ. ಸಂಯೋಜಕ ಪ್ರಭು ಕುಮಾರ್, ಗ್ರಾಮ ಕಾಯಕಮಿತ್ರರು, ಕಾಯಕ ಬಂಧುಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.