ಕಂಪ್ಲಿ: ‘ದೇಶದ ಅಭಿವೃದ್ಧಿ ಯೋಜನೆ ರೂಪಿಸಲು ಜನಗಣತಿ ಅಂಕಿ ಅಂಶ ಅಡಿಪಾಯವಾಗಿದ್ದು, ಅಧಿಕಾರಿಗಳು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು’ ತಹಶೀಲ್ದಾರ್ ಜೂಗಲ ಮಂಜುನಾಯಕ ತಿಳಿಸಿದರು.

ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಮೇಲ್ವಿಚಾರಕರು ಹಾಗೂ ಗಣತಿದಾರರಿಗೆ ಆಯೋಜಿಸಿರುವ ಮೂರು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.

ಹೆಚ್ಚುವರಿ ಅಧಿಕಾರಿ ಜಿ. ಪಂಪಾಪತಿ ಮಾತನಾಡಿ, ‘ಜನಗಣತಿ ಅಂಗವಾಗಿ ತಾಲ್ಲೂಕಿನಲ್ಲಿ 37 ಮೇಲ್ವಿಚಾರಕರು, 221 ಗಣತಿದಾರರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಉಪನ್ಯಾಸಕರಾದ ಮಹೇಶ್, ಜೀರು ಮಲ್ಲಿಕಾರ್ಜುನ, ಚಂದ್ರಶೇಖರ ಬಿಳಿಗುಡ್ಡ, ಖಲೀಲ್ ತರಬೇತಿ ನೀಡಿದರು. ಪುರಸಭೆ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ, ಕಂದಾಯ ನಿರೀಕ್ಷಕ ವೈ.ಎಂ. ಜಗದೀಶ, ಇಸಿಒ ಟಿ.ಎಂ. ಬಸವರಾಜ, ಎಂ. ರೇವಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-25-1708369156

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.