ಕಂಪ್ಲಿ: ಗೋಹತ್ಯೆ ಸಂಪೂರ್ಣವಾಗಿ ನಿಷೇಧಿಸುವಂತೆ ಒತ್ತಾಯಿಸಿದ ಇಲ್ಲಿನ ಗೋಸೇವಕರು ಉದ್ಭವ ಮಹಾಗಣಪತಿ ದೇವಸ್ಥಾನದಿಂದ ತಾಲ್ಲೂಕು ಕಚೇರಿಯವರೆಗೆ ಸೋಮವಾರ ಪಾದಯಾತ್ರೆ ನಡೆಸಿ ತಹಶೀಲ್ದಾರ್ ಜೂಗಲ ಮಂಜುನಾಯಕ ಅವರಿಗೆ ಮನವಿ ಸಲ್ಲಿಸಿದರು.

ಗೋಸೇವಕ ಗೊರ್ತಿ ಶ್ರೀನಿವಾಸುಲು ಮಾತನಾಡಿ, ‘ದೇಶದ ಪ್ರತಿ ರಾಜ್ಯಗಳಲ್ಲಿ ಗೋಶಾಲೆ ಆರಂಭಕ್ಕೆ ಅನುದಾನ ನೀಡಬೇಕು. ಗೋ ರಕ್ಷಣೆಗೆ ಅಗತ್ಯ ಕಾನೂನು ರಚಿಸಬೇಕು. ಗೋಸೇವೆ, ಗೋರಕ್ಷಣೆ, ಗೋ ಗೌರವಕ್ಕಾಗಿ ಸರ್ಕಾರ ಸಕಾರಾತ್ಮಕ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಈ ವೇಳೆ ಕೃಷ್ಣ, ಎಂ.ಕೆ. ಗೋವಿಂದ, ಕೆ.ಎಂ. ಬಸವರಾಜಶಾಸ್ತ್ರಿ, ಎಚ್. ಸತೀಶ್, ದಂತ ವೈದ್ಯ ರಾಮು, ಸೋಮನಗೌಡ ದೇವಲಾಪುರ, ಯಣ್ಣಿ ವೆಂಕಟೇಶ, ಎಲಿಗಾರ ವೆಂಕಟರೆಡ್ಡಿ, ಎನ್.ಎಂ. ಪತ್ರೆಯ್ಯಸ್ವಾಮಿ, ಡಿ.ವಿ. ಸತ್ಯನಾರಾಯಣ, ಸೋಗಿ ಸಂತೋಷ್, ಎಲ್ಐಸಿ ಈರಣ್ಣ, ಉಗಾದಿ ಬಸವರಾಜ, ಪ್ರಭು, ಟಿ. ಕೃಷ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-25-522822296

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.