ಕಂಪ್ಲಿ: ‘ಡೆಂಗಿ ಜ್ವರವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ತಮ್ಮ ಮನೆ ಸುತ್ತ, ಒಳ ಮತ್ತು ಹೊರಾಂಗಣದಲ್ಲಿ ನೀರು ಶೇಖರಣೆ ಆಗದಂತೆ ಎಚ್ಚರವಹಿಸಬೇಕು’ ಎಂದು ಸಮುದಾಯ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ. ಶೋಭಾ ತಿಳಿಸಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಡೆಂಗಿ ನಿರ್ಮೂಲನಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಮಳೆಗಾಲದಲ್ಲಿ ಸಾಮಾನ್ಯವಾಗಿ ನೀರು ಶೇಖರಣೆಯಾಗುತ್ತದೆ. ಇದರಿಂದ ವೈರಾಣು ಜ್ವರ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಎಲ್ಲರೂ ಮುಂಜಾಗ್ರತೆ ವಹಿಸಬೇಕು. ಡೆಂಗಿ ಜ್ವರದ ಲಕ್ಷಣ ಕಂಡು ಬಂದಲ್ಲಿ ಕೂಡಲೇ ವೈದ್ಯರಲ್ಲಿ ಚಿಕಿತ್ಸೆ ಪಡೆಯಬೇಕು. ಡೆಂಗಿ ಜ್ವರ ನಿಯಂತ್ರಣಕ್ಕೆ ಸಮುದಾಯದ ಸಹಭಾಗಿತ್ವ ತುಂಬಾ ಅಗತ್ಯ’ ಎಂದರು.

ವೈದ್ಯರಾದ ಶ್ರೀನಿವಾಸರಾವ್, ಮಲ್ಲೇಶಪ್ಪ, ಪಂಪನಗೌಡ, ಸಾಗರ ಭರಮಕ್ಕನವರ್, ಹಾರಿಕಾ, ನೇತ್ರ ಪರೀಕ್ಷಕ ಪ್ರಕಾಶಗೌಡ, ಆರೋಗ್ಯ ನಿರೀಕ್ಷಣಾಧಿಕಾರಿ ಚನ್ನಬಸವರಾಜ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-25-1280200346

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.