ಕಂಪ್ಲಿ: ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾಮದ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಮುಚ್ಚುವುದನ್ನು ವಿರೋಧಿಸಿ ಶನಿವಾರ ಪ್ರತಿಭಟನೆ ನಡೆಯಿತು.

ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ, ಸರ್ಕಾರ ತನ್ನ ಹಠಮಾರಿ ಧೋರಣೆ ಬಿಡದೆ ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಮುಂದಾಗಿರುವುದನ್ನು ತೀವ್ರವಾಗಿ ಖಂಡಿಸಿದರು.

‘ಬಡವರ ಮಕ್ಕಳು ಓದುವ ಸರ್ಕಾರಿ ಶಾಲೆಗಳನ್ನು ಮುಚ್ಚಿ ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರ ಈ ಮೂಲಕ ನಡೆದಿದೆ’ ಎಂದು ದೂರಿದರು.

ರೈತರ ಮತ್ತು ಕೂಲಿ ಕಾರ್ಮಿಕರು ಮಕ್ಕಳು 4ರಿಂದ 5 ಕಿ.ಮೀ ದೂರ ಹೋಗಿ ಶಿಕ್ಷಣ ಪಡೆಯಲು ತೊಂದರೆಯಾಗುತ್ತದೆ. ಅಲ್ಲದೆ, ಹಳ್ಳಿಯಿಂದ ಹಳ್ಳಿಗೆ ಹೋಗಲು ಎಷ್ಟೊ ಕಡೆ ಸರಿಯಾದ ರಸ್ತೆ, ಬಸ್ ಸಂಪರ್ಕವಿಲ್ಲ. ಈ ಕಾರಣದಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣದ ಹಿತಾಸಕ್ತಿಯಿಂದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಎಐಕೆ ಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ, ಗ್ರಾಮಸ್ಥರಾದ ತಿಪ್ಪೇಸ್ವಾಮಿ, ಕರಿಯಪ್ಪ, ಮಲ್ಲಿಕಾರ್ಜುನ, ಪೋಷಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-25-126731837

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.