ಕಂಪ್ಲಿ: ತಾಲ್ಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ನಕಲಿ, ಕಳಪೆ ಗುಣಮಟ್ಟದ ಕುಡಿಯುವ ನೀರು ಹಾಗೂ ಅವಧಿ ಮೀರಿದ ತಂಪು ಪಾನೀಯಗಳನ್ನು ಮಾರಾಟ ಮಾಡಲಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಆಗ್ರಹಿಸಿದರು.

ಸಮೀಪದ ಎಮ್ಮಿಗನೂರು ಗ್ರಾಮದ ರೈತ ಸಂಘದ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸಂಘದ ಅಧ್ಯಕ್ಷ ವಿ. ವೀರೇಶ್ ಮಾತನಾಡಿ, ‘ಕೆಲ ದಿನಗಳ ಹಿಂದೆ ತಂಪು ಪಾನೀಯ ಸೇವಿಸಿ ಗ್ರಾಮದ ಬಾಲಕನೊಬ್ಬ ಅಸ್ವಸ್ಥನಾಗಿದ್ದ ಪ್ರಕರಣ ಮುಚ್ಚಿಹಾಕಲಾಗಿದೆ’ ಎಂದು ಆರೋಪಿಸಿದರು.

‘ಗ್ರಾಮದಲ್ಲಿ ಸಿದ್ಧವಾಗುವ ಕುಡಿಯುವ ನೀರಿನ ಬಾಟಲ್ಗಳಲ್ಲಿ ಹುಳುಗಳು ಕಾಣಿಸಿಕೊಳ್ಳುತ್ತಿವೆ. ಗ್ರಾಮದಲ್ಲಿ ಕಳಪೆ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ. ಈ ಕುರಿತು ತಾಲ್ಲೂಕು ಆಡಳಿತ, ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಏ.7ರಂದು ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಪಾದಯಾತ್ರೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಈ ವೇಳೆ ರೈತ ಮುಖಂಡ ಬಿ. ಸದಾಶಿವಪ್ಪ, ಎಸ್ಡಿಎಂಸಿ ಅಧ್ಯಕ್ಷ ಬಿ. ರಾಜು, ಪ್ರಮುಖರಾದ ಸಿ. ಬಾಷಸಾಬ್, ಎಸ್. ರಾಮಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-25-1331184125

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.