ಕಂಪ್ಲಿ: ಇಲ್ಲಿನ ಶಾಸಕರ ಜನಸಂಪರ್ಕ ಕಚೇರಿ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಆದಿ ಜಾಂಬವ ಅಭಿವೃದ್ಧಿ ನಿಗಮದ 2021-22 ಮತ್ತು 22-23ನೇ ಸಾಲಿನ 15 ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಬುಧವಾರ ಪರಿಕರ ವಿತರಿಸಲಾಯಿತು.

ಬಳಿಕ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಕೆ.ಎಚ್. ಲಕ್ಷ್ಮಣ ಮಾತನಾಡಿ, ಶಾಸಕ ಜೆ.ಎನ್. ಗಣೇಶ್ ಅವರ ಸೂಚನೆಯಂತೆ ಗಂಗಾ ಕಲ್ಯಾಣ ಯೋಜನೆಯಡಿ ಅರ್ಹ ರೈತ ಫಲಾನುಭವಿಗಳಿಗೆ ತಲುಪಿಸಲಾಗಿದೆ. ರೈತರು ಸದ್ಬಳಕೆ ಮಾಡಿಕೊಂಡು ಪ್ರಗತಿ ಹೊಂದುವಂತೆ ಮನವಿ ಮಾಡಿದರು.

ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 3 ಹಾಗೂ ಆದಿ ಜಾಂಬವ ಅಭಿವೃದ್ಧಿ ನಿಗಮದಡಿ 12 ಸೇರಿ 15 ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಫಲಾನುಭವಿಗಳಾದ ಹರಿಜನ ಮಾರೆಪ್ಪ, ದುರುಗಮ್ಮ, ಸಿ.ಹನುಮಂತಪ್ಪ, ಸಿ.ಕಟ್ಟೆಪ್ಪ, ಉಪ್ಪಾರಹಳ್ಳಿ ಆಂಜನೇಯ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-25-1070986870

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.