ಕಂಪ್ಲಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್, ಸ್ಥಳಿಯ ಪೊಲೀಸ್ ಠಾಣೆ ಆಶ್ರಯದಲ್ಲಿ ಪಟ್ಟಣದಲ್ಲಿ ಗುರುವಾರ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹೆಲ್ಮೆಟ್ ಜಾಗೃತಿ ಅಂಗವಾಗಿ ನಡೆದ ಬೈಕ್ ರ್ಯಾಲಿಗೆ ತಹಶೀಲ್ದಾರ್ ಜೂಗಲ ಮಂಜುನಾಯಕ ಚಾಲನೆ ನೀಡಿ, ತಮ್ಮ ಜೀವ ಉಳಿಸಿಕೊಳ್ಳಲು ಹೆಲ್ಮೆಟ್ ಧರಿಸಿದೆ ಅದೆಷ್ಟೋ ಬೈಕ್ ಸವಾರರು ಸಂಕಷ್ಟ ಎದುರಿಸಿದ್ದಾರೆ. ಹಾಗಾಗಿ, ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಮನವಿ ಮಾಡಿದರು.

ಪಿಐ ಕೆ.ಬಿ. ವಾಸುಕುಮಾರ್ ಮಾತನಾಡಿ, ಠಾಣಾ ವ್ಯಾಪ್ತಿಯಲ್ಲಿ ಹೆಲ್ಮೆಟ್ ಧರಿಸದೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಪ್ರತಿವರ್ಷ ಸರಾಸರಿ 13-15ಪ್ರಕರಣ ದಾಖಲಾಗುತ್ತಿವೆ. ಪ್ರಸಕ್ತ ವರ್ಷ ನಡೆದ ಅಪಘಾತಗಳಲ್ಲಿ ಐವರು ಹೆಲ್ಮೆಟ್ ಧರಿಸದಿದ್ದರಿಂದ ಸಾವನ್ನಪ್ಪಿದ್ದಾರೆ. ಜೂ.1ರಿಂದ ಹೆಲ್ಮೆಟ್ ಧಾರಣೆ ಕಡ್ಡಾಯವಾಗಿದ್ದು, ಹೆಲ್ಮೆಟ್ ಧರಿಸದಿದ್ದಲ್ಲಿ ₹500 ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.

ಮನೆಗೆ ಬೀಗ ಹಾಕಿ ಊರಿಗೆ ಹೋಗುವವವರು ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಸದ್ಭಳಕೆ ಮಾಡಿಕೊಳ್ಳಿ. ವ್ಯಾಟ್ಸಪ್ ನಂಬರ್ 94808 03083ಕ್ಕೆ ಮನೆ ಮುಂಭಾಗದ ಸೆಲ್ಫಿ ಚಿತ್ರದೊಂದಿಗೆ, ಮನೆಯ ವಿಳಾಸ, ಏರಿಯಾ, ಲೋಕೇಷನ್ ಮಾಹಿತಿ ನೀಡಿದಲ್ಲಿ ರಾತ್ರಿ ಎರಡು ಬಾರಿ ಬೇಟಿ ನೀಡಿ ಪರಿಶೀಲಿಸಲಾಗುವುದು ಎಂದರು.

ಎಎಸ್ಐ ಬಸವರಾಜ, ಗೃಹ ರಕ್ಷಕ ದಳದ ಘಟಕಾಧಿಕಾರಿ ಹೊನ್ನೂರ್ ವಲಿ ಸೇರಿದಂತೆ ಪೊಲೀಸ್, ಗೃಹರಕ್ಷಕ ದಳದವರು ಪ್ರಸ್ತುತ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-25-105803113

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.