ಕಂಪ್ಲಿ: ‘ಆಡಳಿತ ವಿಕೇಂದ್ರೀಕರಣಕ್ಕೆ ಮುನ್ನುಡಿ ಬರೆದಿರುವ ಪಂಚಾಯತ್ ರಾಜ್ ವ್ಯವಸ್ಥೆಯು ಭಾರತದ ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ’ ಎಂದು ಶಾಸಕ ಜೆ.ಎನ್. ಗಣೇಶ್ ಅಭಿಪ್ರಾಯಪಟ್ಟರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಉದ್ಘಾಟಿಸಿ, ಗ್ರಾಮಗಳ ನೈರ್ಮಲ್ಯ, ಕುಡಿಯುವ ನೀರು ಪೂರೈಕೆ, ಆರೋಗ್ಯ ರಕ್ಷಣೆಗೆ ಅಧಿಕಾರಿಗಳು ಆದ್ಯತೆ ನೀಡುವಂತೆ ಮನವಿ ಮಾಡಿದರು.

‘ಅಧಿಕಾರಿಗಳು ಗ್ರಾಮೀಣ ಭಾಗದಲ್ಲಿ ಸರ್ಕಾರಿ ಭೂಮಿ ಗುರುತಿಸಿದಲ್ಲಿ ನಿವೇಶನ ರಚಿಸಿ ವಸತಿ ರಹಿತರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

ಪಿಡಿಒ, ಕರ ವಸೂಲಿಗಾರರು, ಸ್ವಚ್ಛತೆಗಾರರು ಸೇರಿದಂತೆ ಉತ್ತಮ ಸಾಧನೆ ಮಾಡಿದ ಅಧಿಕಾರಿ, ಸಿಬ್ಬಂದಿ ಗೌರವಿಸಲಾಯಿತು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಕೆ. ಶ್ರೀನಿವಾಸರಾವ್, ತಾಲ್ಲೂಕು ಪಂಚಾಯಿತಿ ಇಒ ಆರ್.ಕೆ. ಶ್ರೀಕುಮಾರ್, ಸಹಾಯಕ ನಿರ್ದೇಶಕ ಕೆ.ಎಸ್. ಮಲ್ಲನಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-25-1390317756

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.