ಕಂಪ್ಲಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಗುರುವಾರ ರಾತ್ರಿ ಬಿರುಗಾಳಿ ಸಹಿತ 2.41 ಸೆಂ.ಮೀ ಮಳೆಯಾಗಿದ್ದು, ಬಾಳೆ, ಭತ್ತ ಬೆಳೆ ಸೇರಿದಂತೆ ವಿದ್ಯುತ್ ಪರಿವರ್ತಕ ಮತ್ತು ಕಂಬಗಳಿಗೆ ಹಾನಿಯಾಗಿದೆ.

ತಾಲ್ಲೂಕಿನ ನಂ.2 ಮುದ್ದಾಪುರ, ಶಂಕರಸಿಂಗ್ಕ್ಯಾಂಪ್, ಬೊಜ್ಜಯ್ಯಕ್ಯಾಂಪ್, ಕೊಂಡಯ್ಯಕ್ಯಾಂಪ್, ರಾಮಸಾಗರ ಭಾಗದಲ್ಲಿ ರೈತರು ಬೆಳೆದಿದ್ದ ಜಿ9, ಏಲಕ್ಕಿ ತಳಿಯ ಬಾಳೆ ಭಾಗಶಃ ನೆಲಕಚ್ಚಿದ್ದು, ಅಪಾರ ನಷ್ಟ ಉಂಟಾಗಿದೆ.

ದೇವಸಮುದ್ರ ಗ್ರಾಮದಲ್ಲಿ ನಾಲ್ಕು, ಸೋಮಲಾಪುರದಲ್ಲಿ ಒಂದು ವಿದ್ಯುತ್ ಪರಿವರ್ತಕ ಹಾಳಾಗಿದೆ. ಮರ ಬಿದ್ದ ಪರಿಣಾಮ ಎರಡು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಬೆಳಗೋಡುಹಾಳು ಭಾಗದಲ್ಲಿ ನಾಲ್ಕು ವಿದ್ಯುತ್ ಕಂಬಗಳು ಬಿದ್ದಿವೆ. ವಿವಿಧೆಡೆ ಒಟ್ಟು ಆರು ವಿದ್ಯುತ್ ಪರಿವರ್ತಕಗಳು ಹಾಳಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದರಿಂದ ಜನಜೀವನ ಅಸ್ತವ್ಯಸ್ತವಾಯಿತು.

‘ಕಂಪ್ಲಿ ಗ್ರಾಮೀಣ ಭಾಗ ಮತ್ತು ಮೆಟ್ರಿ ಜೆಸ್ಕಾಂ ಶಾಖೆ ವ್ಯಾಪ್ತಿಯಲ್ಲಿ 21ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದಿವೆ. ಹಾನಿಯಾದ ವಿದ್ಯುತ್ ಕಂಬಗಳನ್ನು ತೆರವು ಮಾಡಿ, ಹೊಸ ಕಂಬಗಳನ್ನು ಅಳವಡಿಸುವ ಕಾರ್ಯ ಗುರುವಾರ ರಾತ್ರಿಯಿಂದಲೇ ಆರಂಭವಾಗಿದೆ. ಶೀಘ್ರ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತದೆ’ ಎಂದು ಇಲ್ಲಿನ ಜೆಸ್ಕಾಂ ಎಇಇ ಕೆ. ಶ್ರೀನಿವಾಸಪ್ರಸಾದ್ ತಿಳಿಸಿದರು.

‘ಭತ್ತ, ಬಾಳೆ ಬೆಳೆ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸುವ ಬಗ್ಗೆ ಕಂದಾಯ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ’ ಎಂದು ಶಾಸಕ ಜೆ.ಎನ್. ಗಣೇಶ್ ಪ್ರತಿಕ್ರಿಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-25-208749160

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.