ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕದುರ್ಗಮ್ಮ ಸಿಡಿಬಂಡಿ ಉತ್ಸವ: ಅಧಿಕಾರಿಗಳ ಜತೆ ಸಚಿವ ಸಭೆ

Published 29 ಫೆಬ್ರುವರಿ 2024, 15:56 IST
Last Updated 29 ಫೆಬ್ರುವರಿ 2024, 15:56 IST
ಅಕ್ಷರ ಗಾತ್ರ

ಬಳ್ಳಾರಿ: ಮಾರ್ಚ್ 19ರಂದು ನಡೆಯಲಿರುವ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವಕ್ಕೆ ಸಂಬಂಧಿಸಿ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಸೂಚಿಸಿದರು.

ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ಮಹೋತ್ಸವ ಅಂಗವಾಗಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಶಿಷ್ಟಾಚಾರದಂತೆ ಎಲ್ಲಾರನ್ನೂ ಆಹ್ವಾನಿಸಬೇಕು. ರಥ ಚಕ್ರಗಳನ್ನು ಪರಿಶೀಲಿಸಬೇಕು. ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು’ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಮುದಿಮಲ್ಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ: ಮೋಕಾ ಗ್ರಾಮದ ಮುದಿ ಮಲ್ಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವೂ ಮಾರ್ಚ್ 2ರಂದು ನಡೆಯಲಿದೆ. ಇದಕ್ಕೆ ಅಗತ್ಯ ಸಿದ್ಧತೆ ಮತ್ತು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಸೂಚಿಸಿದರು.

ಕಚೇರಿ ಉದ್ಘಾಟನೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು, ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ‘ಸಿ’ ಬ್ಲಾಕ್‌ನ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 49ರಲ್ಲಿ ತಮ್ಮ ನೂತನ ಕಚೇರಿಯನ್ನು ಗುರುವಾರ ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT