ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡ ಬರಬೇಕು
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನಿಷ್ಠಿ ರುದ್ರಪ್ಪ ಮಾತನಾಡಿ ‘ಬ್ಯಾಂಕುಗಳಲ್ಲಿ ಕನ್ನಡ ವ್ಯವಹಾರ ನಡೆಯುತಿಲ್ಲ. ಕನ್ನಡ ಕಡ್ಡಾಯಗೊಳಿಸಬೇಕೆಂದು ನಿಯಮಗಳಿದ್ದರೂ ಬ್ಯಾಂಕುಗಳು ಇದನ್ನು ಪಾಲಿಸುತ್ತಿಲ್ಲ. ಕನ್ನಡೇತರರ ನೇಮಕಾತಿಯಿಂದ ಈ ಸಮಸ್ಯೆ ಸೃಷ್ಟಿಯಾಗಿದೆ. ಬ್ಯಾಂಕ್‌ಗಳಲ್ಲಿ ಶೀಘ್ರವೇ ಕನ್ನಡ ಕೋಶ ಎಂಬ ಕಾರ್ಯಕ್ರಮವನ್ನು ನಡೆಸಬೇಕು. ಬ್ಯಾಂಕರ್ಸ್ ಸಭೆ ಕರೆದು ಕನ್ನಡ ಅನುಷ್ಠಾನಕ್ಕೆ ನಿರ್ದೇಶನ ನೀಡಬೇಕು’ ಎಂದು ಸಭೆಗೆ ತಿಳಿಸಿದರು. ‘ಜಿಲ್ಲೆಯ ಕೈಗಾರಿಕಾ ವಲಯ ಬ್ಯಾಂಕ್ ಮತ್ತು ಇತರೆ ಸಂಸ್ಥೆಗಳಲ್ಲಿ ಅನ್ಯಭಾಷಿಕರೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಸಭೆಯ ಗಮನಕ್ಕೆ ತಂದರು.