ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟೂರು: ವಿಜೃಂಭಣೆಯಿಂದ ನಡೆದ ಕರಿನಂದಿ ಬಸವೇಶ್ವರ ಸ್ವಾಮಿ ರಥೋತ್ಸವ

Published 23 ಏಪ್ರಿಲ್ 2024, 16:04 IST
Last Updated 23 ಏಪ್ರಿಲ್ 2024, 16:04 IST
ಅಕ್ಷರ ಗಾತ್ರ

ಕೊಟ್ಟೂರು: ತಾಲ್ಲೂಕಿನ ಚಪ್ಪರದಹಳ್ಳಿ ಗ್ರಾಮದ ಕರಿನಂದಿ ಬಸವೇಶ್ವರ ಸ್ವಾಮಿ ರಥೋತ್ಸವ ಮಂಗಳವಾರ ಸಂಜೆ ಸಾವಿರಾರು ಭಕ್ತರ ನಡುವೆ ವಿಜೃಂಭಣೆಯಿಂದ ನೆರವೇರಿತು.

ಬೆಳಗಿನ ಜಾವ ಅರ್ಚಕರ ಬಳಗವು ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿದ್ದಂತೆ ಭಕ್ತರು ಆಗಮಿಸಿ ಸ್ವಾಮಿಯ ದರ್ಶನವನ್ನು ಪಡೆಯಲು ಮುಂದಾದರು.

ಸಂಜೆ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಸಕಲ ಮಂಗಲವಾದ್ಯ ಮೇಳಗಳೊಂದಿಗೆ ರಥದ ಬಳಿ ತಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ನಂತರ ಸ್ವಾಮಿಯನ್ನು ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸುತ್ತಿದ್ದಂತೆ ಭಕ್ತರ ಜಯಘೋಷ ಮೊಳಗಿತು.

ರಥ ಮುಂದೆ ಸಾಗುತ್ತಿದ್ದಂತೆ ಭಕ್ತರು ಬಾಳೆಹಣ್ಣು, ಉತ್ತುತ್ತೆ, ದವನ ತೂರಿ ಭಕ್ತಿ ಸಮರ್ಪಿಸಿದರು.

ಸ್ವಾಮಿಯ ಪಟಾಕ್ಷಿಯನ್ನು ಗ್ರಾಮದ ಬಿ.ಅಜ್ಜಪ್ಪ ₹106,101ಗೆ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT