ಬಳ್ಳಾರಿ: ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮತ್ತು 13 ಮಂದಿ ಹಿರಿಯ ನಾಯಕರು ಸಚಿವರಾಗಿ ಬುಧವಾರ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಆದರೆ, ಇದರಲ್ಲಿ ಬಳ್ಳಾರಿ ಜಿಲ್ಲೆಯ ಯಾರೊಬ್ಬರಿಗೂ ಸ್ಥಾನ ಸಿಗಲಿಲ್ಲ.

ಸಚಿವ ಸ್ಥಾನ ಪಡೆಯಲು ಜಿಲ್ಲೆಯ ನಾಲ್ವರು ಶಾಸಕರು ಪ್ರಯತ್ನ ನಡೆಸಿದ್ದರು. ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಪ್ರಬಲ ಆಕಾಂಕ್ಷಿಯಾಗಿದ್ದರು. ಕಂಪ್ಲಿ ಶಾಸಕ ಜೆ.ಎನ್, ಗಣೇಶ್ ಮತ್ತು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರೂ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು. ‘ಪತ್ನಿ ಅನ್ನಪೂರ್ಣ ಅವರಿಗೆ ಅವಕಾಶ ನೀಡಬೇಕು’ ಎಂದು ಸಂಸದ ಇ. ತುಕಾರಾಂ ಕೂಡ ಕಸರತ್ತು ನಡೆಸಿದ್ದರು.

ಚಾರ್ಜ್ಶೀಟ್ ಕಂಟಕ: ವಾಲ್ಮೀಕಿ ಹಗರಣದಲ್ಲಿ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡಿದ್ದ ಶಾಸಕ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ಸಚಿವ ಸ್ಥಾನ ಸಿಗಲೇಬೇಕು ಎಂದು ನಾಗೇಂದ್ರ ಅವರು ಹೈಕಮಾಂಡ್ ಮಟ್ಟದಲ್ಲಿ ಪ್ರಯತ್ನ ನಡೆಸಿದ್ದರು. ಆದರೆ, ಅದೇ ಹೊತ್ತಿಗೆ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿತು.

ಜಮೀರ್ಗೂ ಇಲ್ಲ ಸ್ಥಾನ: ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರಿಗೂ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಅವರಿಗೆ ಮತ್ತೊಮ್ಮೆ ಜಿಲ್ಲೆಯ ಉಸ್ತುವಾರಿ ನೀಡುವುದು ಬೇಡ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ಈಗಾಗಲೇ ವ್ಯಕ್ತವಾಗಿದ್ದವು.

ಮುಂದಿನ ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ನನ್ನ ಹೆಸರನ್ನು ಸಚಿವ ಸ್ಥಾನಕ್ಕೆ ಪರಿಗಣಿಸುವ ವಿಶ್ವಾಸವಿದ್ದು ಎರಡನೇ ಪಟ್ಟಿಯಲ್ಲಿ ಸ್ಥಾನ ಸಿಗಲಿದೆ.
ಬಿ. ನಾಗೇಂದ್ರ ಬಳ್ಳಾರಿ ಗ್ರಾಮಾಂತರ ಶಾಸಕ

ಎರಡನೇ ಪಟ್ಟಿಯತ್ತ ಚಿತ್ತ

‘ಡಿ.ಕೆ. ಶಿವಕುಮಾರ್ ಅವರ ಸಂಪುಟದ ಮೊದಲ ಹಂತದಲ್ಲಿ ಕೇವಲ ಹಿರಿಯ ಮತ್ತು ಪ್ರಭಾವಿ ನಾಯಕರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ರಾಜಕೀಯದ ಇತರೆಲ್ಲ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ಶೀಘ್ರದಲ್ಲೇ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದು ಅದರಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿವೆ’ ಎಂದು ಜಿಲ್ಲೆಯ ನಾಯಕರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.