ಕಲ್ಯಾಣ ಕರ್ನಾಟಕಕ್ಕೆ 200 ಶಾಲೆ
ಅಕ್ಷರ ಆವಿಷ್ಕಾರ ಯೋಜನೆಯ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 50 ಶಾಲೆಗಳನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಯ ₹200 ಕೋಟಿ ಅನುದಾನದಲ್ಲಿ ಕೆಪಿಎಸ್‌ಗಳಾಗಿ ಮೇಲ್ದರ್ಜೆಗೇರಿಸಲು 2025–26ರ ಬಜೆಟ್‌ನಲ್ಲಿ ಸರ್ಕಾರ ಘೋಷಣೆ ಮಾಡಲಾಗಿತ್ತು. ಸದ್ಯ ರಾಜ್ಯದಾದ್ಯಂತ ಕೆಪಿಎಸ್‌ಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು ಒಟ್ಟು 200 ಶಾಲೆಗಳನ್ನು ಈ ಭಾಗದ ಜಿಲ್ಲೆಗಳಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಕೆಕೆಆರ್‌ಡಿಬಿಯಿಂದಲೇ ಅನುದಾನ ಒದಗಿಸಲು ನಿರ್ಧರಿಸಲಾಗಿದೆ.