ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೂಡ್ಲಿಗಿ ಪಟ್ಟಣ ಪಂಚಾಯ್ತಿ: ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಾಳೆ

Published 18 ಆಗಸ್ಟ್ 2024, 13:58 IST
Last Updated 18 ಆಗಸ್ಟ್ 2024, 13:58 IST
ಅಕ್ಷರ ಗಾತ್ರ

ಕೂಡ್ಲಿಗಿ: ಇಲ್ಲಿನ ಪಟ್ಟಣ ಪಂಚಾಯ್ತಿಗೆ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಆಗಸ್ಟ್ 19ರಂದು ಬೆಳಿಗ್ಗೆ ನಡೆಯಲಿದೆ.

ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
ಬಿಜೆಪಿಯ 6, ಜೆಡಿಎಸ್ 5 ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದು, 7 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್, ಶಾಸಕರು ಮತ್ತು ಸಂಸದರ ಮತವನ್ನೂ ಹೊಂದಿದೆ.

ಕಾಂಗ್ರೆಸ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾವಲ್ಲಿ ಶಿವಪ್ಪ ನಾಯಕ, ಸೈಯದ್ ಶುಕೂರು, ಡಾಣಿ ಚೌಡಮ್ಮ, ಲೀಲಾವತಿ ಪ್ರಭಾಕರ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. 7 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್, ಇಬ್ಬರು ಪಕ್ಷೇತರರನ್ನು ಸೆಳೆದು, ಶಾಸಕರು ಹಾಗೂ ಸಂಸದರ ಮತದೊಂದಿಗೆ ತನ್ನ ಬಲವನ್ನು 11ಕ್ಕೆ ಹೆಚ್ಚಿಸಿಕೊಂಡು, ಅಧಿಕಾರ ಹಿಡಿಯುವ ಯತ್ನ ನಡೆಸಿದೆ.

ಪ.ಪಂ. ಚುನಾವಣೆ ವೇಳೆ ಜೆಡಿಎಸ್‌ನಲ್ಲಿದ್ದ ಮಾಜಿ ಸಚಿವ ಎನ್.ಎಂ. ನಬೀ ಅವರ ನೇತೃತ್ವದಲ್ಲಿ ಐವರು ಅಭ್ಯರ್ಥಿಗಳು ಗೆದ್ದಿದ್ದರು. ಆದರೆ, ಲೋಕಸಭೆ ಚುನಾವಣಾ ಸಂದರ್ಭದಲ್ಲಿ ನಬೀ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡರೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಹಂಚಿಕೊಳ್ಳಬಹುದು ಎನ್ನಲಾಗುತ್ತಿದೆ.‌ ಆದರೆ, ಬಿಜೆಪಿ ಕಾದು ನೋಡುವ ತಂತ್ರ ಅನುಸರಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT