ಕೂಡ್ಲಿಗಿ: ರಾಜ್ಯ ಸರ್ಕಾರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘ ಸೇರಿದಂತೆ ಇಲಾಖೆಯ ಎಲ್ಲಾ ವೃಂದ ಸಂಘಗಳ ತಾಲ್ಲೂಕು ಘಟಕದ ಪದಾಧಿಕಾರಿಗಳು ರಾಜ್ಯ ಸರ್ಕಾರಿ ನೌಕರರ ಸಹಯೋಗದಲ್ಲಿ ಮಂಗಳವಾರ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಸ್. ವೆಂಕಟೇಶ್ ಮಾತನಾಡಿ, ವೈದ್ಯರು ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಅನೇಕ ದಿನಗಳಿಂದ ತಮ್ಮ ವಿವಿಧ ಬೇಡಿಕೆಗಳನ್ನು ಈ ಡೇರಿಸುವಂತೆ ಮಾನವಿ ಮಾಡುತ್ತಲೇ ಬಂದಿದ್ದಾರೆ. ಅವರ ಬೇಡಿಕೆಗಳು ನ್ಯಾಯಯುತವಾಗಿದ್ದು, ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಿಬೇಕು. ಇವರ ಹೋರಾಟಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಪೂರ್ಣ ಬೆಂಬಲವಿದೆ. ನಾಳೆ ಅವರು ಮುಷ್ಕರಕ್ಕೆ ಹೋಗದಂತೆ ಅವರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವ ಭರವಸೆ ಇದೆ ಎಂದು ಹೇಳಿದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಗದೀಶ್ ನಾಯ್ಕ್ ಮಾತನಾಡಿ, ಅನೇಕ ದಿನಗಳಿಂದ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಅದ್ದರಿಂದ ಮಾರ್ಚ್ 11ರಿಂದ ಒಪಿಡಿ ಮುಚ್ಚಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ ಎಂದರು.

ಉಪ ತಹಶೀಲ್ದಾರ್ ರಾಘವೇಂದ್ರ ಮನವಿ ಪತ್ರ ಸ್ವೀಕರಿಸಿದರು. ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಎಸ್.ಪಿ. ಪ್ರದೀಪ್ ಕುಮಾರ್, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈಧ್ಯಾಧಿಕಾರಿ ಡಾ.ಸಿ.ಮಧು, ಡಾ. ಚಿರಂಜೀವಿ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಆರ್.ಬಿ. ಬಸವರಾಜ, ಹಿರಿಯ ಆರೋಗ್ಯ ನಿರೀಕ್ಷಿಣಾಧಿಕಾರಿ ಶ್ರೀನಿವಾಸ್, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಮಂಜುಳ, ಪಿ.ಬಿ. ಗಿರಿಜಾ, ಶಿವಣ್ಣ, ಭವ್ಯಶ್ರೀ, ಕೆ.ಸಿ. ಲಕ್ಷ್ಮೀ, ಎನ್. ರಾಧಸ್ವಾಮಿ, ಹುಲುಗಪ್ಪ, ಹನುಮಂತಪ್ಪ ಸುನೀಲ್ ಸಾತಿಹಾಳ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.